ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದಲ್ಲೂ ಒಲಿಂಪಿಕ್‌ ಆಯೋಜನೆಗೆ ಸಿದ್ಧತೆ

ಶಿವಮೊಗ್ಗದಲ್ಲಿ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಆಶಯ
Last Updated 22 ಫೆಬ್ರುವರಿ 2021, 4:00 IST
ಅಕ್ಷರ ಗಾತ್ರ

ಶಿವಮೊಗ್ಗ: ‘ಭಾರತದಲ್ಲೂ ಒಲಿಂಪಿಕ್ಸ್ ಆಯೋಜನೆ ಮಾಡಲು ಪೂರ್ವಸಿದ್ಧತೆ ಆರಂಭಿಸಲಾಗಿದೆ. ಕೆಲವು ವರ್ಷಗಳಲ್ಲಿ ಆ ಕನಸು ನನಸಾಗಲಿದೆ. ಪದಕ ಪಟ್ಟಿಯಲ್ಲಿ ಭಾರತ 10ರೊಳಗೆ ಕಾಣಿಸಿಕೊಳ್ಳಬೇಕು ಎನ್ನುವ ಗುರಿ ಇದೆ’ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಹೇಳಿದರು.

ಇಲ್ಲಿನ ಸಹ್ಯಾದ್ರಿ ಕಾಲೇಜಿನಲ್ಲಿ ಭಾನುವಾರ ಒಳಾಂಗಣ ಕ್ರೀಡಾಂಗಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ದೇಶದ ಶೇ 70ರಷ್ಟು ಜನರು ದೈಹಿಕ ವ್ಯಾಯಾಮ ಮಾಡುತ್ತಿಲ್ಲ. ಜನರು ಆರೋಗ್ಯಪೂರ್ಣವಾಗಿದ್ದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಅದಕ್ಕಾಗಿಯೇ ‘ಫಿಟ್ ಇಂಡಿಯಾ’ ಯೋಜನೆ ಜಾರಿಗೊಳಿಸಲಾಗಿದೆ ಎಂದರು.

ಕರ್ನಾಟಕದಲ್ಲಿ ಕ್ರೀಡಾ ಚಟುವಟಿಕೆಗೆ ಪೂರಕವಾದ ವಾತಾವರಣವಿದೆ. ಕ್ರೀಡಾ ಚಟುವಟಿಕೆ ಉತ್ತೇಜನಕ್ಕಾಗಿ ರಾಜ್ಯ ಸರ್ಕಾರ ಮುಂದಿಟ್ಟಿರುವ ಎಲ್ಲ ಬೇಡಿಕೆ ಈಡೇರಿಸಲಾಗುತ್ತಿದೆ. ಮುಂದಿನ ಒಲಿಂಪಿಕ್‌ನಲ್ಲಿ ಕರ್ನಾಟಕದ ಕ್ರೀಡಾಪಟುಗಳೂ ಹೆಚ್ಚಿನ ಚಿನ್ನದ ಪದಕದ ಗೆಲ್ಲಬೇಕು ಎನ್ನುವ ನಿರೀಕ್ಷೆ ಇದೆ. ಶಿವಮೊಗ್ಗ ಜಿಲ್ಲೆಯನ್ನೂ ದೇಶದ ಉತ್ತಮ ಕ್ರೀಡಾ ಕೇಂದ್ರವಾಗಿ ರೂಪಿಸಲು ನೆರವು ನೀಡಲಾಗುವುದು.ಖೇಲೊ ಇಂಡಿಯಾ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ ಹೆಚ್ಚಿನ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT