ಸಾಗರ: ಮೂರು ವರ್ಷಗಳಿಗೊಮ್ಮೆ ನಡೆಯುವ ಇಲ್ಲಿನ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಫೆ. 3ರಿಂದ 9 ದಿನಗಳ ಕಾಲ ನಡೆಯಲಿದ್ದು, ಸಿದ್ದತೆಗಳು ಭರದಿಂದ ಸಾಗಿವೆ ಎಂದು ಮಾರಿಕಾಂಬಾ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ ತಿಳಿಸಿದ್ದಾರೆ.

ಇಲ್ಲಿನ ಮಾರಿಕಾಂಬಾ ದೇವಿಯ ಜಾತ್ರೆ ಅಂಗವಾಗಿ ವಸ್ತು ಪ್ರದರ್ಶನ ಮಳಿಗೆ ಹಾಗೂ ಕುಸ್ತಿ ಅಖಾಡ ನಿರ್ಮಾಣಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ಸಾರ್ವಜನಿಕರು, ಸಂಘ ಸಂಸ್ಥೆಗಳ ಪ್ರಮುಖರು, ವಿವಿಧ ಇಲಾಖೆಯ ಅಧಿಕಾರಿಗಳು ಜನಪ್ರತಿನಿಧಿಗಳ ಸಹಕಾರದೊಂದಿಗೆ ಜಾತ್ರೆಯನ್ನು ಯಶಸ್ವಿಯಾಗಿ ನಡೆಸಲು ಸಮಿತಿ ಸಜ್ಜಾಗಿದೆ ಎಂದರು.

ನೆಹರೂ ಮೈದಾನದಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್ ಗೆ ಈಗಾಗಲೆ ಜಾಗ ಟೆಂಡರ್ ಮೂಲಕ ನೀಡಲಾಗಿದೆ. ಗಾಂಧಿ ಮೈದಾನದಲ್ಲಿ ಫೆ. 4 ರಿಂದ 11ರವರೆಗೆ ಪ್ರತಿದಿನ ಸಂಜೆ 6 ರಿಂದ ರಾತ್ರಿ 12 ರವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ತಿಳಿಸಿದರು.

ಫೆ. 6ರಿಂದ 8ರವರೆಗೆ ನೆಹರೂ ಮೈದಾನದಲ್ಲಿ ಪ್ರತಿದಿನ ಮಧ್ಯಾಹ್ನ 3ರಿಂದ ಜಾತ್ರೆಯ ಅಂಗವಾಗಿ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ. ಕರ್ನಾಟಕದ ವಿವಿಧ ಭಾಗಗಳಿಂದ ಹಾಗೂ ಹೊರ ರಾಜ್ಯಗಳಿಂದಲೂ ಪ್ರಸಿದ್ಧಿ ಪಡೆದಿರುವ ಪೈಲ್ವಾನರುಗಳು ಆಗಮಿಸುತ್ತಿದ್ದಾರೆ ಎಂದು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಬಿ.ಗಿರಿಧರರಾವ್ ಮಾಹಿತಿ ನೀಡಿದರು.

ಪ್ರತಿಷ್ಠಾನದ ಉಪಾಧ್ಯಕ್ಷ ಸುಂದರ್ ಸಿಂಗ್, ಖಜಾಂಚಿ ನಾಗೇಂದ್ರ ಕುಮಟಾ, ಸಹ ಕಾರ್ಯದರ್ಶಿ ಎಸ್.ವಿ.ಕೃಷ್ಣಮೂರ್ತಿ, ಕುಸ್ತಿ ಸಮಿತಿ ಸಂಚಾಲಕ ಅಶೋಕ್, ಪ್ರಮುಖರಾದ ರವಿ ನಾಯ್ಡು, ಶಶಿಕಾಂತ್, ಕೆ.ಸಿ.ನವೀನ್, ಬಾಲಕೃಷ್ಣ ಗುಳೇದ್, ತಾರಾಮೂರ್ತಿ, ಲೋಕೇಶ್ ಕುಮಾರ್, ಸಂತೋಷ್ ಸದ್ಗುರು, ಪುರುಷೋತ್ತಮ್, ಗಂಗಾಧರ ಜಂಬಿಗೆ, ಆರ್.ಚಂದ್ರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.