ಶಿವಮೊಗ್ಗ: ದೂರ ಶಿಕ್ಷಣದ ಮಾನ್ಯತೆರದ್ದುಗೊಳಿಸಿದರೆ ಅತಿ ಹೆಚ್ಚು ಜನರಿಗೆ ಉನ್ನತ ಶಿಕ್ಷಣ ನೀಡುವ ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯಕ್ಕೆ ಪೆಟ್ಟು ಬೀಳಲಿದೆ.ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿವೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಪಿ.ವೀರಭದ್ರಪ್ಪ ಕಳವಳ ವ್ಯಕ್ತಪಡಿಸಿದರು.

ಕುವೆಂಪು ವಿಶ್ವವಿದ್ಯಾಲಯದ ಅಧೀನದಲ್ಲಿ 200ಕ್ಕೂ ಹೆಚ್ಚು ಕಲಿಕಾ ಕೇಂದ್ರಗಳಿವೆ. ಯುಜಿಸಿಯ ಆದೇಶ,ಮಾರ್ಗಸೂಚಿಗಳನ್ನುದೂರ ಶಿಕ್ಷಣ ನಿರ್ದೇಶನಾಲಯ ಕಟ್ಟುನಿಟ್ಟಾಗಿ ಪಾಲಿಸುತ್ತಿದೆ. ವಾರ್ಷಿಕ ₨ 7 ಕೋಟಿ ಸಂಗ್ರಹವಾಗುತ್ತಿದೆ. ಈ ಹಣದಲ್ಲೇ ಅತಿಥಿ ಉಪನ್ಯಾಸಕರಿಗೆ, ಹೊರಗುತ್ತಿಗೆ ನೌಕರರಿಗೆ ₨ 4 ಕೋಟಿ ವೇತನ ನೀಡಲಾಗುತ್ತಿದೆ. ಕಾಯಂ ಉಪನ್ಯಾಸಕರು, ಸಿಬ್ಬಂದಿ ಕೊರತೆ ಕಾರಣ ಸರ್ಕಾರದ ಅನುದಾನವೂ ಲಭ್ಯವಿಲ್ಲ. ದೂರ ಶಿಕ್ಷಣ ರದ್ದಾದರೆಅತಿಥಿ ಉಪನ್ಯಾಸಕರು, ಹೊರಗುತ್ತಿಗೆನೌಕರರ ವೇತನ,. ಶೈಕ್ಷಣಿಕ, ಸಂಶೋಧನಾ ಚಟುವಟಿಕೆಗಳಿಗೆ ಸೌಲಭ್ಯಕಲ್ಪಿಸಲು ತೊಂದರೆಯಾಗುತ್ತದೆ ಎಂದರು.

2013ರಿಂದ 2018ರವರೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಮಾನ್ಯತೆ ರದ್ದಾಗಿತ್ತು. ಆ ಸಮಯದಲ್ಲೂಕುವೆಂಪುವಿಶ್ವವಿದ್ಯಾಲಯಯರಾಜ್ಯದ ವಿದ್ಯಾರ್ಥಿಗಳಿಗೆದೂರ ಶಿಕ್ಷಣದ ಮೂಲಕ ಉನ್ನತ ಶಿಕ್ಷಣ ದೊರಕಿಸಿದೆ. ಪ್ರಸ್ತುತ 30 ಸಾವಿರ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಕೆಎಸ್ಒಯುಗೆ ಹೋಲಿಸಿದರೆ ಮೂರುಪಟ್ಟು ಹೆಚ್ಚು ಪ್ರವೇಶ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.

ರಾಜ್ಯ ಸರ್ಕಾರ ಅನುಮತಿ ರದ್ದುಗೊಳಿಸುವ ಕುರಿತು ಸಂಪುಟದಲ್ಲಿ ತೀರ್ಮಾನ ತೆಗೆದುಕೊಂಡಿದೆ. ಮಾನ್ಯತೆ ಹಿಂಪಡೆಯುವ ನಿರ್ಧಾರಪುನರ್ ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದೇವೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಾ.ಸಿ.ಅಶ್ವಥ ನಾರಾಯಣ,ಸಚಿವ ಸಿ.ಟಿ.ರವಿ ಅವರು ಪರಿಶೀಲಿಸುವ ಭರವಸೆ ನೀಡಿದ್ದಾರೆ ಎಂದರು.

ಎಲ್ಲ ವಿಶ್ವವಿದ್ಯಾಲಯಗಳ ಪ್ರವೇಶದಲ್ಲಿ ಭಾರಿ ಇಳಿಕೆಯಾಗಿದೆ. ವಿದ್ಯಾಥಿಗಳಸಂಖ್ಯೆ ಕಡಿಮೆಯಾಗಿದೆ. ರಾಜ್ಯಗಳಲ್ಲಿ ದೂರ ಶಿಕ್ಷಣ ನೀಡಲು ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳು, ಮುಕ್ತ ವಿಶ್ವವಿದ್ಯಾಲಯಗಳ ಜತೆಗೆ, ಇಂದಿರಾಗಾಂಧಿ ರಾಷ್ಟ್ರಿಯ ಮುಕ್ತ ವಿಶ್ವವಿದ್ಯಾಲಯಗಳಿಗೂಯುಜಿಸಿ ಮಾನ್ಯತೆ ಇದೆ. ದೂರ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳುತಮಗೆ ಸೂಕ್ತವಾದವಿಶ್ವವಿದ್ಯಾಲಯಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ಅಭಿಪ್ರಾಯಪಟ್ಟರು.

ಪತ್ರಿಕಾಗೋಷ್ಠಿಯಲ್ಲಿ ಕುಲಸಚಿವ ಪ್ರೊ.ಎಸ್.ಎಸ್.ಪಾಟೀಲ, ಸಿಂಡಿಕೇಟ್ ಸದಸ್ಯರಾದ ಸಂತೋಷ್ ಬಳ್ಳೆಕೆರೆ, ರಮೇಶ್ ಬಾಬು ಜಾದವ್, ರಾಮಲಿಂಗಪ್ಪ, ಎಸ್.ಆರ್.ನಾಗರಾಜ್, ಪ್ರೊ.ಕಿರಣ್ ದೇಸಾಯ್, ಕುವೆಂಪು ವಿವಿ ದೂರಶಿಕ್ಷಣ ನಿರ್ದೇಶಕ ಡಾ.ಜಿ.ನಾರಾಯಣ್, ಸಾರ್ವಜನಿಕ ಸಂಪರ್ಕಾಧಿಕಾರಿ ಸತ್ಯಪ್ರಕಾಶ್ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.