ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಎಸ್‌.ಈಶ್ವರಪ್ಪ ವಿರುದ್ಧ ಆರೋಪ ಸತ್ಯಕ್ಕೆ ದೂರ

Last Updated 20 ಜುಲೈ 2020, 12:13 IST
ಅಕ್ಷರ ಗಾತ್ರ

ಶಿವಮೊಗ್ಗ: ಸಚಿವ ಕೆ.ಎಸ್‌.ಈಶ್ವರಪ್ಪ ಅವರ ವಿರುದ್ದ ಮಾಜಿ ಶಾಸಕ ಕೆ.ಬಿ.ಪ್ರನ್ನಕುಮಾರ್‌ ಅವರು ಮಾಡಿರುವ ಆರೋಪ ಸತ್ಯಕ್ಕೆ ದೂರ. ನೀಡಿದ ಹೇಳಿಕೆ ಹಿಂಪಡೆಯಬೇಕು ಎಂದುಬಿಜೆಪಿರೈತ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ದತ್ತಾತ್ರಿ ಆಗ್ರಹಿಸಿದರು.

ಕೆ.ಎಸ್‌.ಈಶ್ವರಪ್ಪ ಅವರು ಅವರು 5 ಬಾರಿ ಶಾಸಕರಾಗಿ, ಮೂರು ಬಾರಿ ಸಚಿವರಾಗಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅಂತಹವರಿಗೆ ನಿಷ್ಕ್ರೀಯ ಸಚಿವ ಎಂದಿರುವ ಕೆ.ಬಿ.ಪ್ರಸನ್ನಕುಮಾರ್ ಹೇಳಿಕೆ ಖಂಡನೀಯ. ಶಾಸಕರಾಗಿ ಯಾವ ಕೆಲಸ ಮಾಡದ ಅವರು ತಮ್ಮನ್ನು ಗುರುತಿಸಿಕೊಳ್ಳಲು ಇಂತಹ ಟೀಕೆ ಮಾಡುತ್ತಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಲೇವಡಿ ಮಾಡಿದರು.

ಈಶ್ವರಪ್ಪ ಅವರುಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ.ಕೊರೊನಾದಂತ ಸಂದಿಗ್ಧಸಮಯದಲ್ಲೂಅವರು ಒಂದು ದಿನವೂ ಮನೆಯಲ್ಲಿ ಕೂರದೆ,ಜನರ ಬಳಿಯೋಗಿ ಯೋಗಕ್ಷೇಮ ವಿಚಾರಿಸಿದ್ದಾರೆ. ಯಾವ ಅಧಿಕಾರಿಗಳನ್ನು ವರ್ಗಾವಣೆ ಮಾಡಿಸಿಲ್ಲ ಎಂದು ಕುಟುಕಿದರು.

ಮೆಗ್ಗನ್‌ ಆಸ್ಪತ್ರೆಯ ವ್ಯವಸ್ಥೆ ಬದಲಿಸಿ, ರೋಗಿಗಳ ಅನುಕೂಲಕ್ಕಾಗಿ ಶ್ರಮ ಹಾಕಿದ್ದಾರೆ. ಆಸ್ಪತ್ರೆ ಅಭಿವೃದ್ದಿಗಾಗಿ 56 ಸಭೆಗಳನ್ನು ನಡೆಸಿದ್ದಾರೆ. ಆಸ್ಪತ್ರೆಗೆ ತುರ್ತು ಅಗತ್ಯವಿದ್ದ ಸಿಟಿ ಸ್ಕ್ಯಾನಿಂಗ್ ಉಪಕರಣ, ಎಂಆರ್‌ಐಸ್ಕ್ಯಾನಿಂಗ್ ಉಪಕರಣ ಒದಗಿಸಿ, ತಜ್ಞ ವೈದ್ಯರನ್ನು ನೇಮಿಸಿ ಬಡಜನರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದರು.

ಗೋಪಿಶೆಟ್ಟಿಕೊಪ್ಪ ಹಾಗೂ ಗೋವಿಂದಾಪುರದಲ್ಲಿ ಆಶ್ರಯ ಯೋಜನೆಯಡಿ ಮಾದರಿ ಮನೆಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಟೆಂಡರ್ ಪ್ರಕ್ರಿಯೆಯೂ ಮುಗಿದಿದೆ. ಮುಂದಿನ ಒಂದು ವರ್ಷದಲ್ಲಿ ಹಂಚಿಕೆ ಮಾಡುವ ಎಲ್ಲ ಕ್ರಮ ಕೈಗೊಂಡಿದ್ದಾರೆ. ಸ್ಲಂ ನಿವಾಸಿಗಳಿಗೆ ನಕಲಿ ಹಕ್ಕುಪತ್ರ ನೀಡಿದ್ದಾರೆ. ಕೆ.ಬಿ.ಪ್ರಸನ್ನಕುಮಾರ್‌ ಅವರು ಶಾಸಕರಾಗಿ ಏನೂ ಮಾಡಿಲ್ಲ ಎಂದು ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಬಳ್ಳೆಕೆರೆ ಸಂತೋಷ್, ಶಿವರಾಜ್, ನಾಗರಾಜ್, ಕೆ.ವಿ.ಅಣ್ಣಪ್ಪ, ಮೋಹನ್ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT