ಶನಿವಾರ, ಅಕ್ಟೋಬರ್ 24, 2020
22 °C

ಸೇವಾ ಭದ್ರತೆಗೆ ಅತಿಥಿ ಉಪನ್ಯಾಸಕರ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸುವ ವಿಷಯ ಸಂಪುಟ ಸಮಿತಿ ಮುಂದೆ ತರಬೇಕು ಎಂದು ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಅಧ್ಯಕ್ಷ ಡಾ.ಎಚ್. ಸೋಮಶೇಖರ ಶಿಮೊಗ್ಗಿ ಒತ್ತಾಯಿಸಿದರು.

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸುವ ಕುರಿತು ಸದನದಲ್ಲಿ ಸ್ಪಷ್ಟ ನಿರ್ಧಾರ ಪ್ರಕಟವಾಗಿಲ್ಲ. ಇದರಿಂದ ಸಾ ನಿರಾಶೆಯಾಗಿದೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದರು.

ಲಾಕ್‍ಡೌನ್ ಅವಧಿ ವೇತನ ನೀಡುವಂತೆ 11 ವಾರಗಳಿಂದ ರಾಜ್ಯದ ಎಲ್ಲೆಡೆ ಮುಷ್ಕರ ನಡೆಸಲಾಗುತ್ತಿದೆ. ಈ ಬಾರಿಯ ಅಧಿವೇಶನದಲ್ಲಿ ಬಾಕಿ ವೇತನ ಕೊಡಿಸುವ ವಿಷಯ ಚರ್ಚೆಯಾಗಿದೆ. ಸೇವಾ ಭದ್ರತೆ ವಿಚಾರ ಚರ್ಚೆಯಾಗಲೇ ಇಲ್ಲ ಎಂದು ದೂರಿದರು.

ಪದವೀಧರರ ಕ್ಷೇತ್ರ ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯರು ನಮ್ಮ ಪರ ನಿಲ್ಲಲಿಲ್ಲ. ಅತಿಥಿ ಉಪನ್ಯಾಸಕರ ಹಿತ ಕಾಪಾಡುವಲ್ಲಿ ಹಿಂದೆ ಸರಿದಿದ್ದಾರೆ. ಕೋವಿಡ್‌ ಕಾರಣಕ್ಕೆ ಈ ಬಾರಿ ಕಾಲೇಜುಗಳಲ್ಲಿ ದಾಖಲಾತಿ ಇಳಿಮುಖವಾಗಿದೆ. ತರಗತಿ ಆರಂಭ ಅಸ್ಪಷ್ಟವಾಗಿದೆ. ವಿಶ್ವವಿದ್ಯಾಲಯದಲ್ಲಿ ಆನ್‍ಲೈನ್ ತರಗತಿಗೆ  ಅತಿಥಿ ಉಪನ್ಯಾಸಕರನ್ನು ಬಳಸಿ ಕೊಳ್ಳಲಾಗಿದೆ. ಆದರೆ, ಕಾಲೇಜು ಶಿಕ್ಷಣ ಇಲಾಖೆ ಅತಿಥಿ 2020-21ನೇ ಸಾಲಿಗೆ ನೇಮಕವೇ ಮಾಡಿಕೊಂಡಿಲ್ಲ. ಈ ವಿಚಾರವಾಗಿ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರು ಮಧ್ಯ ಪ್ರವೇಶಿಸಿ ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಎಂ.ಸಿ.ನರಹರಿ, ಡಿಎಸ್‌ಎಸ್ ಮುಖಂಡ ಎಚ್.ಟಿ.ಹಾಲೇಶಪ್ಪ, ಎಂ.ಆರ್.ಶಿವಕುಮಾರ್ ಅಸ್ತಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು