ಗುರುವಾರ , ಅಕ್ಟೋಬರ್ 29, 2020
26 °C
ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಸುಂದರೇಶ್‌ ಮಾಹಿತಿ

ಎರಡನೇ ಹಂತಕ್ಕೆ ಕಾಂಗ್ರೆಸ್‌ ‘ಆರೋಗ್ಯ ಅಭಯ ಹಸ್ತ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಕೊರೊನಾ ನಿರ್ಮೂಲನೆಗಾಗಿ ಕಾಂಗ್ರೆಸ್‌ ರೂಪಿಸಿದ ‘ಆರೋಗ್ಯ ಅಭಯ ಹಸ್ತ’ ಕಾರ್ಯಕ್ರಮ ಜಿಲ್ಲೆಯಲ್ಲಿ  ಎರಡನೇ ಹಂತದತ್ತ ಸಾಗಿದೆ ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ಸುಂದರೇಶ್‌ ಹೇಳಿದರು.

ಪಕ್ಷದ ಕಾರ್ಯಕರ್ತರು ಕೊರೊನಾ ವಾರಿಯರ್‌ಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜನರ ಮನೆಗಳಿಗೆ ತೆರಳಿ ಆರೋಗ್ಯ ಪರೀಕ್ಷೆ, ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವುದು, ಮುಂಜಾಗ್ರತಾ ಕ್ರಮ ಕೈಗೊಳ್ಳುವುದು, ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಆರೋಗ್ಯ ಅಭಯ ಹಸ್ತದಲ್ಲಿ ಸೇವೆ ಸಲ್ಲಿಸುತ್ತಿರುವ ವಾರಿಯರ್‌ಗಳಿಗೆ ಕೆಪಿಸಿಸಿಯಿಂದ ವಿಮೆ ನೀಡಲಾಗುತ್ತಿದೆ. ಜಿಲ್ಲೆಗೆ 800 ವಿಮಾ ಪಾಲಿಸಿಗಳು ಬಂದಿವೆ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು.

ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ 14 ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವ್ಯಾಪ್ತಿಯಲ್ಲಿ ಕೋವಿಡ್ ನಿಯುಕ್ತಿಗೊಳಿಸಲು ಕಾಂಗ್ರೆಸ್‌ ಪಣ ತೊಟ್ಟಿದೆ. ಕೋವಿಡ್ ವಿರುದ್ಧ ಜಾಗೃತಿ ಮೂಡಿಸುವುದು, ಜನರಿಗೆ ಅಗತ್ಯ, ಸುರಕ್ಷತಾ ಸಾಮಾಗ್ರಿ, ಔಷಧ ವಸ್ತುಗಳನ್ನು ಒದಗಿಸಲಾಗುತ್ತಿದೆ ಎಂದರು.

ವಾರಿಯರ್‌ಗಳಿಗೆ ₹ 1 ಲಕ್ಷ ಮೊತ್ತದ ಆರೋಗ್ಯ ವಿಮಾ ಪಾಲಿಸಿಗಳನ್ನು ನೀಡಲಾಗುತ್ತಿದೆ. ಬ್ಲಾಕ್‌ಮಟ್ಟದಲ್ಲೂ ವಿತರಣೆ ಮಾಡಲಾಗುವುದು. ಮೊದಲ ಹಂತದ ಈ ಕಾರ್ಯಕ್ರಮ ಮುಕ್ತಾಯವಾಗಿದೆ. ಅ.18ರಿಂದ ಒಂದು ತಿಂಗಗಳು ಬೇರೆ ಬೇರೆ ಸ್ಥಳಗಳಲ್ಲಿ ಕಾರ್ಯಕ್ರಮ ಮುಂದುವರಿಯಲಿದೆ ಎಂದು ಮಾಹಿತಿ ನೀಡಿದರು.

ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್‌, ಕೊರೊನಾ ಹತೋಟಿಗೆ ರಾಜ್ಯ ಸರ್ಕಾರ ವಿಫಲವಾಗಿದೆ. ಡಿ.ಕೆ.ಶಿವಕುಮಾರ್ ಅವರು ಕೊರೊನಾ ತಡೆಗಟ್ಟಲು ಕಾಂಗ್ರೆಸ್ ಆರೋಗ್ಯ ಅಭಯ ಹಸ್ತ ಕಾರ್ಯಕ್ರಮ ಜಾರಿಗೆ ತಂದಿದ್ದಾರೆ. ಪಕ್ಷದ ವಾರಿಯರ್‌ಗಳು ಈ ಕಾರ್ಯಕ್ರಮ ಯಶಸ್ವಿಗೊಳಿಸಿದ್ದಾರೆ ಎಂದರು.

ಜಿಲ್ಲಾ ಬೂತ್‌ಮಟ್ಟದ ಏಜೆಂಟರ ನೇಮಕಾತಿ ಮುಖ್ಯಸ್ಥರಾಗಿ ಆರ್.ಪ್ರಸನ್ನಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರು ನೇಮಕ ಮಾಡಿದ್ದು, ಅವರನ್ನು ಪಕ್ಷದ ಮುಖಂಡರು ಅಭಿನಂದಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಡಾ.ಶ್ರೀನಿವಾಸ್, ಪಂಡಿತ್ ವಿ. ವಿಶ್ವನಾಥ್‌, ನಾಗರಾಜ್, ಎಸ್.ರವಿಕುಮಾರ್, ಸಿ.ಎಸ್.ಚಂದ್ರಭೂಪಾಲ್, ಹನುಮಂತು, ಬಾಬು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.