ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನವ ಹಕ್ಕುಗಳ ಫೋಷಣೆಗೆ ಆದ್ಯತೆ: ಮಂಜುನಾಥ್

Last Updated 10 ಡಿಸೆಂಬರ್ 2020, 10:09 IST
ಅಕ್ಷರ ಗಾತ್ರ

ಶಿವಮೊಗ್ಗ: ಮಾನವ ಹಕ್ಕುಗಳ ಪಾಲನೆ, ಪೋಷಣೆಗಾಗಿ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಸಂಘ ಅಸ್ತಿತ್ವಕ್ಕೆ ಬಂದಿದೆ ಎಂದು ಸಂಘದ ಜಿಲ್ಲಾ ಕಾರ್ಯದರ್ಶಿ ಎಸ್.ಮಂಜುನಾಥ್ ಹೇಳಿದರು.

ಮಾನವ ಹಕ್ಕುಗಳ ದಿನಾಚರಣೆ. ಮನುಕುಲದ ಜನ್ಮಸಿದ್ಧ ಹಕ್ಕುಗಳನ್ನು ಗೌರವಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಮಾನವ ಹಕ್ಕುಗಳ ಮೌಲ್ಯಗಳನ್ನು ಎತ್ತಿ ಹಿಡಿಯಲು ಸಂಘ ಶ್ರಮಿಸಲಿದೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಹೆಣ್ಣುಮಕ್ಕಳ ಶೋಷಣೆ, ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ಭ್ರಷ್ಟಾಚಾರ, ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ನಡೆಯುತ್ತಲೇ ಇವೆ. ಜನಸಾಮಾನ್ಯರು ನೆಮ್ಮದಿಯಿಂದ ಬದುಕುವುದು. ಸಹಬಾಳ್ವೆ ನಡೆಸುವುದು ಕಷ್ಟವಾಗಿದೆ. ಸಮಾನತೆಯ ಹಕ್ಕುಗಳೇ ಇಲ್ಲವಾಗಿದೆ.ಶಿವಮೊಗ್ಗದಲ್ಲಿ ನಡೆದ ಬಾಲಕಿ ಮೇಲಿನ ಅತ್ಯಾಚಾರ, ಹಲ್ಲೆ ಘಟನೆ ಖಂಡನೀಯ ಎಂದು ಕಳವಳ ವ್ಯಕ್ತಪಡಿಸಿದರು.

ಗ್ರಾಮೀಣ ಬುಡಕಟ್ಟು, ಆದಿವಾಸಿ ಜನಾಂಗದವರಿಗೂ ಹಕ್ಕುಗಳ ಕುರಿತು ಅರಿವು ಮೂಡಿಸುವ ಅಗತ್ಯವಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚಿನ ಕೆಲಸ ಮಾಡಬೇಕಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಅಬ್ದುಲ್‌ರಜಾಕ್, ಕಾರ್ಯದರ್ಶಿ ಎಸ್‌.ಸತೀಶ್, ಸಮೀವುಲ್ಲಾ, ಮಹೇಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT