ಶಿವಮೊಗ್ಗ: ಹಾಸ್ಟೆಲ್ ಸಮಸ್ಯೆ ಸರಿಪಡಿಸಲು ಆಗ್ರಹಿಸಿ ಮನವಿ ಸಲ್ಲಿಸಲು ಹೋಗಿದ್ದ ವಿದ್ಯಾರ್ಥಿಗಳಿಗೆಜಾತಿ ನಿಂದನೆ ಮಾಡಿದ ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎಸ್.ಎಸ್.ಪಾಟೀಲ್ ಅವರನ್ನು ಬಂಧಿಸಬೇಕು. ಸೇವೆಯಿಂದ ಅಮಾನತುಗೊಳಿಸಬೇಕು ಎಂದು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ವಿನಯ್ ಕೆ.ಸಿ.ರಾಜಾವತ್ ಒತ್ತಾಯಿಸಿದರು.

ಎಲ್ಲಾ ವಿದ್ಯಾರ್ಥಿಗಳನ್ನೂ ಒಂದೇ ರೀತಿ ನೋಡಬೇಕು.ಜಾತಿನಿಂದನೆ ಬಂಜಾರ ಸಮಾಜಕ್ಕೆ ಮಾಡಿದ ಅವಮಾನ.ಕುಲಸಚಿವರು ಬಹಿರಂಗವಾಗಿ ಕ್ಷಮೆಯಾಚಿಸಬೇಕುಎಂಬ ಮನವಿಗೆ ಸ್ಪಂದಿಸದ ಕಾರಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಬಂಜಾರ ಸಮಾಜದ ಗುರುಗಳ ನೇತೃತ್ವದಲ್ಲಿರಾಜ್ಯದ ಎಲ್ಲೆಡೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಬಂಜಾರ ಸಮಾಜದ ಯುವ ಮುಖಂಡ ಡಿ.ಆರ್.ಗಿರೀಶ್ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘಟನೆ ಮುಖಂಡರಾದ ವೆಂಕಟೇಶ್, ಉಮಾಮಹೇಶ್ವರ್ ನಾಯ್ಕ, ಮಂಜಾನಾಯ್ಕ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.