ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದಾಶಿವ ಆಯೋಗದ ವರದಿಯ ಪ್ರಸ್ತಾವ ಹಿಂದಕ್ಕೆ ಪಡೆಯಲು ಒತ್ತಾಯ

Published 24 ಮೇ 2023, 16:07 IST
Last Updated 24 ಮೇ 2023, 16:07 IST
ಅಕ್ಷರ ಗಾತ್ರ

ಸಾಗರ: ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಕಳುಹಿಸಿರುವ ಪ್ರಸ್ತಾವವನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆಯಬೇಕು’ ಎಂದು ಭೋವಿ ಅಭಿವೃದ್ಧಿ ನಿಗಮದ ಮಾಜಿ ಸದಸ್ಯ ಕೆ.ಸಿದ್ದಪ್ಪ ಒತ್ತಾಯಿಸಿದ್ದಾರೆ.

ಸದಾಶಿವ ಆಯೋಗದ ವರದಿ ಅನುಷ್ಠಾನವಾದರೆ ರಾಜ್ಯದಲ್ಲಿರುವ 50 ಲಕ್ಷಕ್ಕೂ ಹೆಚ್ಚು ವಡ್ಡಾ ಭೋವಿ ಸಮುದಾಯದವರಿಗೆ ಅನ್ಯಾಯವಾಗುತ್ತದೆ. ಇದನ್ನು ಈಗಿನ ಸರ್ಕಾರ ಸರಿಪಡಿಸಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

‘ಸದಾಶಿವ ಆಯೋಗದ ವರದಿಯನ್ನು ಬೆಂಬಲಿಸಿದ್ದು ಕೂಡ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವರದಿಯ ಶಿಫಾರಸ್ಸುಗಳನ್ನು ತಿರಸ್ಕರಿಸುತ್ತದೆ ಎನ್ನುವ ಭರವಸೆಯಿಂದ ವಡ್ಡಾ ಭೋವಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ರಾಜ್ಯದಾದ್ಯಂತ ಬೆಂಬಲಿಸಿದ್ದಾರೆ. ಈ ಕಾರಣದಿಂದ ಸರ್ಕಾರ ಸಮುದಾಯದ ವಿಶ್ವಾಸವನ್ನು ಉಳಿಸಿಕೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

‘ಭೋವಿ ಅಭಿವೃದ್ಧಿ ನಿಗಮಕ್ಕೆ ಹಿಂದಿನ ಬಿಜೆಪಿ ಸರ್ಕಾರ ಸೂಕ್ತ ಅನುದಾನ ನೀಡದೆ ಅನ್ಯಾಯ ಎಸಗಿತ್ತು. ನೂತನ ಸರ್ಕಾರ ಹೆಚ್ಚಿನ ಅನುದಾನ ನೀಡುವ ಮೂಲಕ ಸಮುದಾಯದ ಸಮಗ್ರ ಅಭಿವೃದ್ಧಿಗೆ ಮುಂದಾಗಬೇಕು’ ಎಂದು ಅವರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT