ಭದ್ರಾವತಿ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ವತಿಯಿಂದ ಬಸವೇಶ್ವರ ಧರ್ಮಸಂಸ್ಥೆ ಹಾಗೂ ತಾಲೂಕಿನ ವಿವಿಧ ಸಂಘ-ಸಂಸ್ಥೆಗಳು ಮತ್ತು ಬಸವಾಭಿಮಾನಿಗಳ ಸಹಯೋಗದಲ್ಲಿ ಜೂನ್ 25ರಂದು ಸಂಜೆ 6 ಗಂಟೆಗೆ ಹೊಸಸೇತುವೆ ರಸ್ತೆಯಲ್ಲಿರುವ ಬಸವೇಶ್ವರ ಸಭಾಭವನದಲ್ಲಿ ವಿಶ್ವಗುರು ಬಸವಣ್ಣನವರ ಜಯಂತ್ಯುತ್ಸವ ಹಾಗೂ ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಎನ್.ಎಸ್ ಮಲ್ಲಿಕಾರ್ಜುನಯ್ಯ ಹೇಳಿದರು.
ಶಿವಮೊಗ್ಗ ಬಸವ ಕೇಂದ್ರದ ಬಸವ ಮರುಳಸಿದ್ದ ಸಾಮೀಜಿ ಸಾನ್ನಿಧ್ಯ ವಹಿಸುವರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಎಚ್.ಎನ್ ಮಹಾರುದ್ರ ಉದ್ಘಾಟಿಸುವರು. ಇದೇ ಸಂದರ್ಭದಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತಿದೆ. ತಹಶೀಲ್ದಾರ್ ಟಿ.ಜಿ. ಸುರೇಶ್ ಆಚಾರ್ ಮತ್ತು ಬಸವೇಶ್ವರ ಧರ್ಮಸಂಸ್ಥೆ ಶಿವಕುಮಾರ್ ಉಪಸ್ಥಿತರಿರುವರು. ನಿವೃತ್ತ ಪ್ರಾಧ್ಯಾಪಕ ಡಾ.ಗುರುಪಾದ ಎಸ್. ಮರಿಗುದ್ದಿ ಉಪನ್ಯಾಸ ನೀಡುವರು. ಹೊನ್ನಾಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಿ. ಧನಂಜಯ ಅಭಿನಂದನಾ ನುಡಿಗಳನ್ನು ಆಡುವರು ಎಂದರು.
ಡಾ.ಬಿ.ಜಿ ಧನಂಜಯ, ಎಚ್.ಎನ್. ಮಹಾರುದ್ರ, ಬಾರಂದರೂ ಪ್ರಕಾಶ್, ನಂದಿನಿ, ಮಲ್ಲಿಕಾರ್ಜುನ್, ಎಂ. ವಿರೂಪಾಕ್ಷಪ್ಪ, ಅರಳಿಹಳ್ಳಿ ಅಣ್ಣಪ್ಪ, ಮಲ್ಲಿಕಾಂಬ ವಿರೂಪಾಕ್ಷಪ್ಪ, ರಾಜಶೇಖರ್, ಸದಾಶಿವಪ್ಪ, ಚಿಗಟೇರಪ್ಪ, ನಾಗರಾಜ್ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.