ಶಿವಮೊಗ್ಗ: ರಾಜ್ಯದ ವಿವಿಧ ವಸತಿ ಯೋಜನೆಗಳ ಪ್ರಗತಿ ಸ್ಥಳ ಪರಿಶೀಲನೆ ಮಾಡಿ,ವಿವರಗಳನ್ನುಮೊಬೈಲ್ ಆ್ಯಪ್, ವೆಬ್‌ಪೋರ್ಟಲ್‌ಗಳಲ್ಲಿ ಅಪ್‌ಲೋಡ್ ಮಾಡಲು ರಚಿಸಿರುವ ಸಮಿತಿಯಿಂದ ಗ್ರಾಮಲೆಕ್ಕಾಧಿಕಾರಿಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಗ್ರಾಮ ಲೆಕ್ಕಾಧಿಕಾರಿಗಳ ಸಂಘದಸದಸ್ಯರು ಶುಕ್ರವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ರಾಜ್ಯದ ವಸತಿ ಯೋಜನೆಗಳ ಪ್ರಗತಿಯಲ್ಲಿರುವ ಮನೆಗಳಿಗೆ ಅನುದಾನ ಬಿಡುಗಡೆ ಮಾಡಲು ದಾಖಲೀಕರಣ ಮತ್ತು ಸ್ಥಳ ಪರಿಶೀಲನಾ ವರದಿಯನ್ನು ಪಡೆಯಲು ಸಮಿತಿ ರಚಿಸಲಾಗಿದೆ. ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳನ್ನುಸದಸ್ಯ ಕಾರ್ಯದರ್ಶಿಗಳಾಗಿ ನೇಮಿಸಲಾಗಿದೆ.ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜತೆ ಜಂಟಿಯಾಗಿಈ ಕೆಲಸ ಮಾಡಬೇಕಿದೆಎಂದು ಅಳಲು ತೋಡಿಕೊಂಡರು.

ವಸತಿ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಮಾಡಲಾಗಿದೆ.ಆಯಾ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರೂಪ್ ಬಿ ವೃಂದ ಮತ್ತು ಮೇಲ್ಪಟ್ಟ ಅಧಿಕಾರಿಗಳನ್ನು ನೇಮಿಸಿ ವಸತಿ ಯೋಜನೆಯ ಪರಿಶೀಲನೆ ನಡೆಸಲು ಕೋರಲಾಗಿದೆ. ಆದರೂ ಒತ್ತಡ ಹೇರಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮ ಲೆಕ್ಕಾಧಿಕಾರಿಗಳು ಸಾಕಷ್ಟು ಕೆಲಸದ ಒತ್ತಡದಲ್ಲಿ ಇದ್ದಾರೆ. ಅನ್ಯ ಇಲಾಖೆಯ ಕೆಲಸ ಕಾರ್ಯ ಕಂದಾಯ ಇಲಾಖೆ ಸಿಬ್ಬಂದಿ ಮೇಲೆ ಹೇರಬಾರದು. ಕೆಲಸಗಳನ್ನು ನಿಗದಿತ ಅವಧಿಯಲ್ಲಿ ನಿರ್ವಹಿಸಬೇಕಿರುವ ಕಾರಣ ವಿಳಂಬವಾಗುತ್ತದೆ. ಮಾನಸಿಕ ಖಿನ್ನತೆಗೆ ಒಳಗಾಗುತ್ತಾರೆ. ಪಂಚಾಯತ್ ರಾಜ್ ಇಲಾಖೆಯ ಕೆಲಸವಾದ ವಸತಿ ಯೋಜನೆಗಳ ಪ್ರಗತಿಪರಿಶೀಲಗೆನಿಯೋಜಿಸುವುದು ಸೂಕ್ತವಲ್ಲ ಎಂದರು.

ಜಿಲ್ಲಾ ಸರ್ಕಾರಿ ನೌಕರರ ಸಂಘ, ಜಿಲ್ಲಾ ಕಂದಾಯ ಇಲಾಖೆ ನೌಕರರ ಸಂಘ, ಜಿಲ್ಲಾ ಗ್ರಾಮಲೆಕ್ಕಿಗರ ಲೆಕ್ಕಾಧಿಕಾರಿಗಳಸಂಘದ ಮುಖಂಡರಾದ ಅರುಣ್ ಕುಮಾರ್, ಶಾಂತರಾಜ್, ರಮೇಶ್, ಯೋಗೀಶ್ ನಾಯ್ಕ್, ಗಣೇಶ್ಮನವಿ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.