ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ | ಮಾಂಸ ಮಾರಾಟ ಅಂಗಡಿಗಳ ಎದುರು ದರಪಟ್ಟಿ ಕಡ್ಡಾಯ

Last Updated 10 ಜೂನ್ 2020, 10:29 IST
ಅಕ್ಷರ ಗಾತ್ರ

ಶಿವಮೊಗ್ಗ: ಮಾಂಸ ಮಾರಾಟ ಅಂಗಡಿಗಳ ಮುಂದೆ ದರಪಟ್ಟಿ ಹಾಕುವುದು ಕಡ್ಡಾಯ ಎಂದು ನಗರ ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಆರ್.ಸಿ.ನಾಯಕ್ ಸೂಚಿಸಿದರು.

ಪಾಲಿಕೆ ಸಭಾಂಗಣದಲ್ಲಿ ಬುಧವಾರ ನಗರದ ಚಿಕನ್ ಮತ್ತು ಮಟನ್ ಸ್ಟಾಲ್ ಮಾಲೀಕರ ಸಭೆಯಲ್ಲಿ ಅವರು ಮಾತನಾಡಿದರು.

ಲಷ್ಕರ್ ಮೊಹಲ್ಲಾ ಮೀನು ಮಾರುಕಟ್ಟೆಯಲ್ಲಿರುವ ಮಳಿಗೆಗಳು ಉದ್ದಿಮೆ ಪರವಾನಿಗೆ ನವೀಕರಣ ಮಾಡಬೇಕು. ಚಿಕನ್ ಮತ್ತು ಮಟನ್ ಸ್ಟಾಲ್‍ಗಳಲ್ಲಿ ಘನ ಮತ್ತು ದ್ರವ ತ್ಯಾಜ್ತ ನಿರ್ವಹಣೆ, ಸಂಗ್ರಹಣೆ, ಸ್ವಚ್ಛತೆ ಕಾಪಾಡಬೇಕು. ತ್ಯಾಜ್ಯ ಹರಿದುಹೋಗಲು ಸೂಕ್ತ ವ್ಯವಸ್ಥೆ ಮಾಡಬೇಕು. ವಾಹನ ನಿಗದಿಪಡಿಸಿಕೊಂಡು ವಿಲೇವಾರಿ ಮಾಡಬೇಕು ಎಂದು ತಾಕೀತು ಮಾಡಿದರು.

ಪ್ಲಾಸ್ಟಿಕ್ ಸಂಪೂರ್ಣ ನಿಷೇಧವಾಗಿದೆ. ಮಾರಾಟಗಾರರು ಗ್ರಾಹಕರುಗಳಿಗೆ ಪ್ಲಾಸ್ಟಿಕ್ ಚೀಲದಲ್ಲಿ ಮಾಂಸ ನೀಡಬಾರದು. ಸ್ಟಿಕ್ ಬ್ಯಾಗ್ ಬದಲಿಗೆ ಬಟ್ಟೆ ಬ್ಯಾಗ್ ಬಳಸಬೇಕು. ಕೇಂದ್ರ ಸರ್ಕಾರದ ನಿಯಮಾವಳಿಯಂತೆ ಪ್ಲಾಸ್ಟಿಕ್ ಬಳಸಿದರೆ ಪರವಾನಗಿ ರದ್ದು ಮಾಡಲಾಗುವುದು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕೊರೊನಾ ವೇಗವಾಗಿ ಹರಡುತ್ತಿರುವ ಪರಿಣಾಮ ಅಂಗಡಿಗಳಲ್ಲಿ ಅಂತರವನ್ನು ಕಾಪಾಡಿಕೊಳ್ಳಬೇಕು. ಮಾಂಸ ಮಾರಾಟ ಮಳಿಗೆಗಳ ಮಾಲೀಕರು ಕುಂದು, ಕೊರತೆ ಪರಿಹರಿಸಿಕೊಳ್ಳಲು ನೂತನ ಸಂಘ ರಚಿಸಿಕೊಳ್ಳುವಂತೆ ಸಲಹೆ ನೀಡಿದರು.

ಸಮಿತಿ ಸದಸ್ಯರಾದ ನಾಗರಾಜ್ ಕಂಕಾರಿ, ರೇಖಾ ರಂಗನಾಥ್, ಆರೋಗ್ಯಾಧಿಕಾರಿ ಮದಕರಿ ನಾಯಕ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT