ಬುಧವಾರ, ಮೇ 18, 2022
27 °C
ಪ್ರಧಾನಿ ಮೋದಿ ಭಾವಚಿತ್ರಕ್ಕೆ ಮಸಿ ಬಳಿದು, ಸೌದೆ ಒಲೆ ಹಚ್ಚಿ ಕಾಂಗ್ರೆಸ್‌ ಪ್ರತಿಭಟನೆ

ಬೆಲೆ ಏರಿಕೆ: ಕೇಂದ್ರದ ವಿರುದ್ಧ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ನಗರದ ಮಹಾವೀರ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಪ್ರಧಾನಿ ಮೋದಿಯ ಭಾವಚಿತ್ರಕ್ಕೆ ಮಸಿ ಬಳಿದು, ಸೌದೆ ಒಲೆ ಹಚ್ಚುವ ಪ್ರತಿಭಟನೆ ಮಾಡಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ‘ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆ ನಿತ್ಯವೂ ಏರುತ್ತಿವೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡಿ, ದೇಶದ ಜನರಿಗೆ ಬರೆ ಹಾಕಲಾಗುತ್ತಿದೆ. ಇದೇ ಬಿಜೆಪಿ ಅವರು ಹೇಳಿದ ಅಚ್ಛೇದಿನ್‌ ಇರಬೇಕು’ ಎಂದು ಲೇವಡಿ ಮಾಡಿದರು.

ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಏರಿಕೆ ಮಾಡುತ್ತಾ ಕೋವಿಡ್ ಸಂಕಷ್ಟದಲ್ಲಿರುವ ಜನರನ್ನು ತೆರಿಗೆ ನೆಪದಲ್ಲಿ ಮತ್ತಷ್ಟು ಕಂಗಾಲಾಗುವಂತೆ ಮಾಡಿದ್ದಾರೆ. ಈಗಾಗಲೇ ರೈತ, ಕಾರ್ಮಿಕ, ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಅನುಷ್ಠಾನಗೊಳಿಸಿ ಸರ್ಕಾರಿ ವಲಯಗಳನ್ನು ಖಾಸಗೀಕರಣ ಮಾಡಲು ಹೊರಟಿರುವ ಬಿಜೆಪಿ ಸರ್ಕಾರವನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಗಿರೀಶ್, ಎಂ. ಪ್ರವೀಣ್ ಕುಮಾರ್, ಪ್ರದೀಪ್, ಎಸ್.ಪಿ. ದಿನೇಶ್, ರವಿಕುಮಾರ್, ಯಮುನಾ ರಂಗೇಗೌಡ, ಎಚ್.ಸಿ. ಯೋಗೀಶ್, ಮೆಹಖ್ ಷರೀಫ್, ಅನಿತಾ ಕುಮಾರಿ, ಬಿ.ಲೋಕೇಶ್, ಈ.ಟಿ. ನಿತಿನ್, ವಿನಯ್, ಎಸ್. ಕುಮರೇಶ್, ವಿನೋದ್ ಕುಮಾರ್, ಅಫ್ತಾಬ್ ಅಹ್ಮದ್, ರಾಘವೇಂದ್ರ, ಕರುಣಾಕರ, ಸ್ಟೆಲ್ಲಾ ಮಾರ್ಟಿನ್, ಚಂದ್ರಕಲಾ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.