ಶನಿವಾರ, ಅಕ್ಟೋಬರ್ 1, 2022
23 °C

ಶಿವಮೊಗ್ಗ ಸುಬ್ಬಣ್ಣ ಕುಟುಂಬಕ್ಕೆ ಪ್ರಧಾನಿ ಮೋದಿ ಸಾಂತ್ವನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇತ್ತೀಚೆಗೆ ನಿಧನರಾದ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ಪತ್ನಿ ಶಾಂತಾ ಸುಬ್ಬಣ್ಣ ಅವರಿಗೆ ಪತ್ರ ಬರೆದಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಸಾಂತ್ವನ ಹೇಳಿದ್ದಾರೆ.

‘ಸುಬ್ಬಣ್ಣ ಅವರು ಕನ್ನಡ ಸಂಗೀತ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡಿದ್ದರು. ಯುವ ಜನರನ್ನು ಕನ್ನಡ ಸಂಗೀತ ಲೋಕದ ಜತೆಗೆ ಬೆಸಯುವುದಕ್ಕೆ ಪೂರಕವಾಗಿ ಅವರು ಮಾಡಿರುವ ಕೆಲಸಗಳು ಸದಾ ಸ್ಮರಣೀಯ’ ಎಂದು ಮೋದಿ ಅವರು ಆಗಸ್ಟ್‌ 16ರಂದು ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾಗಿದ್ದ ಕನ್ನಡದ ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದಿಂದ ಭಾರತದ ಸಂಗೀತ ಮತ್ತು ಕಲಾ ಕ್ಷೇತ್ರಗಳಿಗೆ ಅಪಾರ ನಷ್ಟವಾಗಿದೆ. ಕನ್ನಡ ಸಂಗೀತ ಲೋಕಕ್ಕೆ ನೀಡಿರುವ ಕೊಡುಗೆಗಳಿಂದಾಗಿಯೇ ಅವರು ಸದಾ ನೆನಪಿನಲ್ಲಿ ಉಳಿಯುತ್ತಾರೆ’ ಎಂದು ಓಂ ಬಿರ್ಲಾ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು