ಭಾನುವಾರ, ಮಾರ್ಚ್ 26, 2023
24 °C

ವಿಶ್ವ ಜುಡೋ ದಿನಾಚರಣೆ-ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ: ಸಂಸದ ರಾಘವೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಕಾರಿಪುರ: ಜಿಲ್ಲೆಯ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಭಾನುವಾರ ಏಕಲವ್ಯ ಜುಡೋ ಕ್ಲಬ್ ಆಯೋಜಿಸಿದ್ದ ವಿಶ್ವ ಜುಡೋ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮನುಷ್ಯ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಪೂರಕ. ಮಕ್ಕಳು ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಮೂಲಕ ಸದೃಢರಾಗಬೇಕು. ಶಿವಮೊಗ್ಗ ನಗರ ಸೇರಿ ಜಿಲ್ಲೆಯ ವಿವಿಧ ತಾಲ್ಲೂಕುಗಳ ಕ್ರೀಡಾಂಗಣಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ಸಾವಿರಾರು ಕೋಟಿ ಅನುದಾನವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ತರಲಾಗಿದೆ ಎಂದರು.

ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಆರಂಭಿಸಲು ಕಾಮಗಾರಿ ನಡೆಯುತ್ತಿದೆ. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೇ ಮಾರ್ಗ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಹಕಾರದಿಂದ ತಾಲ್ಲೂಕಿಗೆ ನೀರಾವರಿ ಯೋಜನೆಯನ್ನು ಅನುಷ್ಠಾನ ಮಾಡಲಾಗಿದೆ ಎಂದರು.

ಪುಷ್ಪಾ ವಿದ್ಯಾಸಂಸ್ಥೆ ಫಾದರ್ ಸಂತೋಷ್ ಡಿ. ಅಲ್ಮೇಡಾ, ರಾಷ್ಟ್ರೀಯ ಜುಡೋ ಮಹಿಳಾ ತಂಡದ ತರಬೇತುದಾರ ತ್ರಿವೇಣಿ ಜಿತೇಂದ್ರಸಿಂಗ್, ಬಾಕ್ಸಿಂಗ್ ಚಿನ್ನದ ಪದಕ ವಿಜೇತ ಬೆಂಜಮಿನ್ ಫ್ರಾನ್ಸಿಸ್ ಸಿದ್ಧಿ, ಶಿವಮೊಗ್ಗ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ಸ್ ಅಧ್ಯಕ್ಷ ಚಂದ್ರಕಾಂತ್ ಜಿ. ಭಟ್, ಏಕಲವ್ಯ ಜುಡೋ ಕ್ಲಬ್ ಅಧ್ಯಕ್ಷ ಗಿರೀಶ್ ಧಾರಾವಾಡ, ಉಪಾಧ್ಯಕ್ಷ ಎನ್.ವಿ. ಈರೇಶ್, ಕಾರ್ಯದರ್ಶಿ ಡಿ.ಬಿ. ಮಿಥುನ್, ಪದಾಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು