ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರು ಪೂರೈಕೆಗೆ ಆದ್ಯತೆ ನೀಡಿ: ಕಾಂಗ್ರೆಸ್ ಸದಸ್ಯರ ಒತ್ತಾಯ

ಪುರಸಭೆ ಸಾಮಾನ್ಯ ಸಭೆ
Last Updated 7 ಏಪ್ರಿಲ್ 2022, 4:34 IST
ಅಕ್ಷರ ಗಾತ್ರ

ಶಿಕಾರಿಪುರ:ಕೆಲವು ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಿದ್ದು, ಸಮರ್ಪಕ ನೀರು ಸರಬರಾಜು ಮಾಡಬೇಕು ಎಂದು ಪುರಸಭೆ ಕಾಂಗ್ರೆಸ್ ಸದಸ್ಯರು ಒತ್ತಾಯಿಸಿದರು.

ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಬುಧವಾರ ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರು ಈ ಒತ್ತಾಯ ಮಾಡಿದರು.

ಕಾಂಗ್ರೆಸ್ ಸದಸ್ಯ ಹುಲ್ಮಾರ್ ಮಹೇಶ್ ಮಾತನಾಡಿ, ‘ಪಟ್ಟಣದ ರಾಘವೇಂದ್ರ ಬಡಾವಣೆ, ಗಬ್ಬೂರು ಸೇರಿ ಕೆಲವು ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಈ ವಾರ್ಡ್‌ಗಳಲ್ಲಿ ಕೊಳವೆಬಾವಿ ಕೊರೆಯಿಸಿ ನೀರು ಒದಗಿಸಬೇಕು. ಗಬ್ಬೂರು ಬಡಾವಣೆಯಲ್ಲಿ 5 ಲಕ್ಷ ಲೀಟರ್ ನೀರು ಸಂಗ್ರಹ ಸಾಮರ್ಥ್ಯದ ಓವರ್ ಹೆಡ್ ಟ್ಯಾಂಕ್ ನಿರ್ಮಿಸಲು ಮುಂದಾಗಬೇಕು’ ಎಂದು ಸಲಹೆನೀಡಿದರು.

ಪಟ್ಟಣದಲ್ಲಿ ಪುರಸಭೆ ವ್ಯಾಪ್ತಿಯಲ್ಲಿರುವ ಕೆರೆಗಳನ್ನುಸರ್ವೆ ಮಾಡಬೇಕು. ಕೆರೆ ಮುಂಭಾಗ ಪುರಸಭೆ ನಾಮಫಲಕ ಹಾಕಬೇಕು. ಒತ್ತುವರಿಯಾಗಿದ್ದರೆ ಪರಿಶೀಲನೆ ನಡೆಸಬೇಕು. ಕೆರೆಗಳ ಹೂಳೆತ್ತಿಸಿ, ಮೀನು ಬಿಟ್ಟು ಆದಾಯ ಪಡೆಯಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಪಟ್ಟಣದಲ್ಲಿ ಕೊಳವೆಬಾವಿ ದುರಸ್ತಿ ಮಾಡುವ ಗುತ್ತಿಗೆದಾರರು ದುರಸ್ತಿ ಸಂಬಂಧ ದೂರು ನೀಡಿದರೆ ಸ್ಪಂದಿಸುತ್ತಿಲ್ಲ ಎಂದು ಕಾಂಗ್ರೆಸ್‌ ಸದಸ್ಯರು ಆರೋಪಿಸಿದರು.

ಇದಕ್ಕೆಪ್ರತಿಕ್ರಿಯಿಸಿದ ಪುರಸಭೆ ಬಿಜೆಪಿ ಸದಸ್ಯ ಟಿ.ಎಸ್. ಮೋಹನ್, ‘ಪುರಸಭೆ ಕಾಮಗಾರಿಗಳನ್ನು ಸಮರ್ಪಕವಾಗಿ ಮಾಡದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರ್ಪಡೆ ಮಾಡಬೇಕು. ಮುಂದಿನ ದಿನಗಳಲ್ಲಿ ಯಾವುದೇ ಕಾಮಗಾರಿ ನೀಡಬಾರದು’ ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸದಸ್ಯ ಎಸ್.ಪಿ. ನಾಗರಾಜ್ ಗೌಡ್ರು, ‘ಖಾಸಗಿ ಬಸ್ ನಿಲ್ದಾಣ ಅವ್ಯವಸ್ಥೆಯ ಆಗರವಾಗಿದೆ. ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡುತ್ತಿಲ್ಲ ಎಂಬ ಬಗ್ಗೆ ದೂರು ಬಂದಿದೆ. ಬಸ್ ನಿಲ್ದಾಣದ ಸ್ವಚ್ಛತೆ ಕಾಪಾಡಲು ಮುಂದಾಗಬೇಕು’ ಎಂದು ಆಗ್ರಹಿಸಿದರು.

ಕಾಂಗ್ರೆಸ್ ಸದಸ್ಯ ಉಳ್ಳಿದರ್ಶನ್, ‘ಏ.15, 16 ರಂದು ಹುಚ್ಚರಾಯಸ್ವಾಮಿ ದೇವರ ಜಾತ್ರಾ ಮಹೋತ್ಸವ ನಡೆಯಲಿದೆ. ಆದರೆ ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತರಿಗೆ ಶೌಚಾಲಯ ವ್ಯವಸ್ಥೆ ಇಲ್ಲದಂತಾಗಿದೆ. ದೇವಸ್ಥಾನ ಸಮೀಪವಿರುವ ಶೌಚಾಲಯ ಕಾರ್ಯನಿರ್ವಹಿಸುತ್ತಿಲ್ಲ. ಶೌಚಾಲಯ ಸೌಲಭ್ಯ ಕಲ್ಪಿಸಲು ಮುಂದಾಗಬೇಕು’ ಎಂದರು.

ಕಾಂಗ್ರೆಸ್ ಸದಸ್ಯ ಗೋಣಿ ಪ್ರಕಾಶ್ ಹಾಗೂ ಬಿಜೆಪಿ ಸದಸ್ಯ ಜೀನಳ್ಳಿ ಪ್ರಶಾಂತ್, ‘ದೇವರಾಜ ಅರಸು ನಗರ, ಕುಂಬಾರಗುಂಡಿ ಬಡಾವಣೆಗಳಲ್ಲಿ ನಿವಾಸಿಗಳಿಗೆ ಇಲ್ಲಿಯವರೆಗೆ ಹಕ್ಕುಪತ್ರ ನೀಡಿಲ್ಲ. ನಿವೇಶನ ಅದಲು ಬದಲಾಗಿ ಮನೆ ನಿರ್ಮಿಸಿಕೊಂಡವರಿಗೆ ದಾಖಲೆ ಸರಿಪಡಿಸಿ ಅವರ ಹೆಸರಿಗೆ ಖಾತೆ ಮಾಡಿಕೊಡಬೇಕು’ ಎಂದು ಒತ್ತಾಯಿಸಿದರು.

ಪಟ್ಟಣದಲ್ಲಿರುವ ಕೆಲವು ಸರ್ಕಾರಿ ಶಾಲೆಗಳಲ್ಲಿ ಸಮರ್ಪಕ ಶೌಚಾಲಯ ವ್ಯವಸ್ಥೆ ಇಲ್ಲ. ಶೌಚಾಲಯ ನಿರ್ಮಿಸಬೇಕು ಹಾಗೂ ನಾಗರಿಕರ ನಿವೇಶನದ ಈ ಸ್ವತ್ತಿನ ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಕೆಲವು ಸದಸ್ಯರು ಮನವಿ ಮಾಡಿದರು.

ಪುರಸಭೆ ಅಧ್ಯಕ್ಷೆ ಟಿ.ಎಂ. ಲಕ್ಷ್ಮೀ ಮಹಾಲಿಂಗಪ್ಪ ಅಧ್ಯಕ್ಷತೆ ವಹಿಸಿದ್ದರು.

ಪುರಸಭೆ ಉಪಾಧ್ಯಕ್ಷ ಮೊಹಮದ್ ಸಾದಿಕ್, ಸ್ಥಾಯಿ ಸಮಿತಿ ಅಧ್ಯಕ್ಷ ರೇಣುಕಾಸ್ವಾಮಿ, ಮುಖ್ಯಾಧಿಕಾರಿ ಸುರೇಶ್, ಭದ್ರಾಪುರ ಫಾಲಾಕ್ಷ, ರೂಪಕಲಾ ಎಸ್. ಹೆಗಡೆ, ಗುರುರಾಜ್ ರಾವ್ ಜಗತಾಪ್, ಬೆಣ್ಣೆ ದೇವೆಂದ್ರಪ್ಪ, ರೇಖಾಬಾಯಿ ಮಂಜುಸಿಂಗ್, ರೋಷನ್, ಜಯಶ್ರೀ ಹೇಮರಾಜ್, ಶ್ವೇತಾ ರವೀಂದ್ರ, ಸುರೇಶ್ ರಾಮಯ್ಯ, ರಮೇಶ್, ಹರಿಹರ ಸಿದ್ದಲಿಂಗಪ್ಪ, ಉಮಾವತಿ, ವಿಶ್ವನಾಥ್, ಸುನಂದಾ ಮಂಜುನಾಥ್, ಫೈರೋಜಾಬಾನು, ಕಮಲಮ್ಮ ಹುಲ್ಮಾರ್, ಶಕುಂತಲ ಗೋಣಿ ಶಿವಪ್ಪ, ಶೈಲಾ ಯೋಗೀಶ್, ರೂಪಾ ಮಂಜುನಾಥ್, ಪುರಸಭೆ ಆರೋಗ್ಯ ನಿರೀಕ್ಷಕ ರಾಜ್‌ಕುಮಾರ್, ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT