ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರಕಾರ್ಮಿಕರಿಗೆ ನಿವೇಶನ ನೀಡಲು ಆದ್ಯತೆ

ಪೌರಕಾರ್ಮಿಕರ ದಿನಾಚರಣೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ
Last Updated 1 ಅಕ್ಟೋಬರ್ 2020, 8:29 IST
ಅಕ್ಷರ ಗಾತ್ರ

ಶಿಕಾರಿಪುರ: ‘ಪೌರಕಾರ್ಮಿಕರಿಗೆ ನಿವೇಶನ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದು ಸಂಸದ ಬಿ.ವೈ.ರಾಘವೇಂದ್ರ ಭರವಸೆ ನೀಡಿದರು.

ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಬುಧವಾರ ನಡೆದ ಪೌರಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಪಟ್ಟಣ ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪೌರಕಾರ್ಮಿಕರ ಸೇವೆ ಶ್ಲಾಘನೀಯ. ಬೆಲೆ ಕಟ್ಟಲಾಗದು. ಹಲವು ವರ್ಷಗಳ ಹಿಂದೆಯೇ ಆಶ್ರಯ ಬಡಾವಣೆಯಲ್ಲಿ ಬಹುತೇಕ ಪೌರಕಾರ್ಮಿಕರಿಗೆ ನಿವೇಶನ ಒದಗಿಸಲಾಗಿದೆ. ಪ್ರಸ್ತುತ ಪಟ್ಟಣದ ಎರಡು ಸಾವಿರ ನಿವಾಸಿಗಳಿಗೆ ನಿವೇಶನ ಒದಗಿಸಲು ರೈತರಿಂದ ಭೂಮಿ ಖರೀದಿಸಲು ಮುಂದಾಗಿದ್ದೇವೆ. ಈ ಭೂಮಿಯಲ್ಲಿ ನಿವೇಶನ ದೊರೆಯದ ಪೌರಕಾರ್ಮಿಕರಿಗೆ ನಿವೇಶನ ನೀಡುತ್ತೇವೆ. ಭಾಷಣಕ್ಕೆ ಸೀಮಿತವಾಗದೇ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ’ ಎಂದು ಭರವಸೆ ನೀಡಿದರು.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ‘ಕೋವಿಡ್ ಸಂದರ್ಭದಲ್ಲಿ ಜೀವದ ಹಂಗನ್ನು ತೊರೆದು ಪೌರಕಾರ್ಮಿಕರು ಕರ್ತವ್ಯ ನಿರ್ವಹಿಸಿರುವುದು ಪ್ರಶಂಸನೀಯ. ಸರ್ಕಾರ ಪೌರಕಾರ್ಮಿಕರನ್ನು ಗುರುತಿಸಲು ಪೌರಕಾರ್ಮಿಕ ದಿನಾಚರಣೆ ಆಯೋಜಿಸಿದೆ. ಪೌರಕಾರ್ಮಿಕರಾಗಿದ್ದ ಗೌರಮ್ಮ ಪಿ.ರಾಮಯ್ಯ ಅವರನ್ನು ಪುರಸಭೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದ ರಾಘವೇಂದ್ರ ಅವಕಾಶ ಮಾಡಿಕೊಟ್ಟಿದ್ದರು’ ಎಂದರು.

ಪುರಸಭೆ ಆಡಳಿತಾಧಿಕಾರಿ ಹಾಗೂ ಸಾಗರ ಉಪ ವಿಭಾಗಾಧಿಕಾರಿ ಡಾ. ನಾಗರಾಜ್ ನಾಯ್ಕ್, ಪುರಸಭೆ ಮುಖ್ಯಾಧಿಕಾರಿ ಸುರೇಶ್, ಸದಸ್ಯರಾದ ಎಚ್.ಫಾಲಾಕ್ಷ, ಜೀನಳ್ಳಿ ಪ್ರಶಾಂತ್, ಆರೋಗ್ಯ ನಿರೀಕ್ಷಕ ರಾಜ್ ಕುಮಾರ್, ರಂಜಿತ್, ಪ್ರವೀಣ್, ಸಮುದಾಯ ಸಂಘಟನಾಧಿಕಾರಿ ರಾಮಚಂದ್ರಪ್ಪ, ಪೌರಕಾರ್ಮಿಕರ ಸಂಘದ ಅಧ್ಯಕ್ಷ ಗೋಪಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT