ಗುರುವಾರ , ಜುಲೈ 29, 2021
27 °C

ನ್ಯಾಯಬೆಲೆ ಅಂಗಡಿ ಪುನರಾರಂಭಕ್ಕೆ ಆಕ್ಷೇಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯಲ್ಲಿ ಅಮಾನತು ಮಾಡಿರುವ ನ್ಯಾಯಬೆಲೆ ಅಂಗಡಿ ಮತ್ತೆ ತೆರೆಯಲು ಅವಕಾಶ ನೀಡಬಾರದು ಎಂದು ಆಗ್ರಹಿಸಿ ಆಶ್ರಯ ಬಡಾವಣೆಯ ನಾಗರಿಕರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಲಾಕ್‌ಡೌನ್‌ ಸಮಯದಲ್ಲಿ ಬಡವರಿಗೆ ಉಚಿತವಾಗಿ ನೀಡಿದ್ದ ಪಡಿತರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದ ಆರೋಪದ ಮೇಲೆ ಎಫ್ಐಆರ್ ದಾಖಲಾಗಿತ್ತು. ತಪಾಸಣೆಗೆ ಬಂದ ಅಧಿಕಾರಿಗಳ ಜತೆಯೂ ಅನುಚಿತವಾಗಿ ವರ್ತಿಸಿದ್ದರು. ಅಂಗಡಿ ಮಾಲೀಕರ ಅವ್ಯವಹಾರಗಳ ವಿರುದ್ಧ ಅಧಿಕಾರಿಗಳಿಗೆ ದೂರು ಕೊಟ್ಟವರಿಗೆ ಬೆದರಿಕೆ ಹಾಕಿದ್ದರು. ಹಾಗಾಗಿ, ಇಂತಹ ಅಂಗಡಿಗೆ ಮತ್ತೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.

ಆಶ್ರಯ ಬಡಾವಣೆಯ ಪುರುಷೋತ್ತಮ್, ಸುರೇಶ್‌, ಸುಬ್ರಹ್ಮಣ್ಯ, ಕುಮಾರ, ಮಧು, ಮಲ್ಲಿಕಾರ್ಜುನ, ಶ್ರೀನಿವಾಸ್ ಮನವಿ ಸಲ್ಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.