ಬುಧವಾರ, ಡಿಸೆಂಬರ್ 1, 2021
21 °C

ಭದ್ರಾವತಿ ತಹಶೀಲ್ದಾರ್ ಅಮಾನತಿಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ‘ಭದ್ರಾವತಿ ತಾಲ್ಲೂಕು ಕಚೇರಿಯಲ್ಲಿ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿಗೆ ತಹಶೀಲ್ದಾರ್‌ ಎಚ್‌.ಸಿ. ಶಿವಕುಮಾರ್‌ ಅವರು ಲೈಂಗಿಕ ಕಿರುಕುಳ ನೀಡಿದ್ದು, ಅವರನ್ನು ಕೂಡಲೇ ಅಮಾನತುಗೊಳಿಸಬೇಕು’ ಎಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದ ಜಿಲ್ಲಾ ಸಂಚಾಲಕ ಹಾಲೇಶಪ್ಪ ಒತ್ತಾಯಿಸಿದರು.

ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆ ಭದ್ರಾವತಿಯ ಹಳೇನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ವಿಷಯ ತಿಳಿದ ಜಿಲ್ಲಾಧಿಕಾರಿ ಅವರು ಶಿವಕುಮಾರ್‌ ಅವರನ್ನು ತಹಶೀಲ್ದಾರ್ ಸೇವೆಯಿಂದ ಬಿಡುಗಡೆಗೊಳಿಸಿದ್ದಾರೆ. ಇಷ್ಟು ಸಾಲದು ಅವರನ್ನು ಬಂಧಿಸಿ, ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.

ಎಸ್. ಮಣಿಶೇಖರ್, ಕುಬೇಂದ್ರಪ್ಪ, ಬದ್ರಿನಾರಾಯಣ್, ಮಂಜುನಾಥ್, ಮೈಲಾರಪ್ಪ, ಯೋಗೇಶ್ವರಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.