ಶನಿವಾರ, ಸೆಪ್ಟೆಂಬರ್ 19, 2020
22 °C

ಪೌರಕಾರ್ಮಿಕರ ಸೇವೆ ಕಾಯಂಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಕೊರೊನಾ ವಾರಿಯರ್‌ಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ಪೌರಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಬೇಕು ಎಂದು ಒತ್ತಾಯಿಸಿ ನೇರ ಪಾವತಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

‘20 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಪೌರಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ. 2018-19ನೇ ಸಾಲಿನಲ್ಲಿ ಗುತ್ತಿಗೆ ಪದ್ಧತಿ ರದ್ದುಪಡಿಸಿ ನೇರ ವೇತನ ಪಾವತಿ ಅಡಿಯಲ್ಲಿ ಕಾರ್ಯ ನಿರ್ವಹಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ವೇತನದಲ್ಲಿ ತಾರತಮ್ಯವಾಗುತ್ತಿದೆ. ಯಾವುದೇ ಸೌಲಭ್ಯಗಳೂ ದೊರೆಯುತ್ತಿಲ್ಲ’ ಎಂದು ಪ್ರತಿಭಟನಕಾರರು ಆರೋಪಿಸಿದರು.

‘ನೇರ ಪಾವತಿಯಿಂದ ಪೌರಕಾರ್ಮಿಕರ ಜೀವನ ನಿರ್ವಹಣೆ ತುಂಬಾ ಕಷ್ಟಕರವಾಗಿದೆ. ಈಗ ಕೊಡುತ್ತಿರುವ ವೇತನ ಸಮಯಕ್ಕೆ ಸರಿಯಾಗಿ ದೊರೆಯುತ್ತಿಲ್ಲ. ಸೇವಾ ಅವಧಿಗೆ ಅನುಗುಣವಾಗಿ ಸೇವೆಯನ್ನು ಕಾಯಂ ಮಾಡಬೇಕು’ ಎಂದು ಒತ್ತಾಯಿಸಿದರು.

ಸಂಘದ ಅಧ್ಯಕ್ಷ ಪಂಚಲಯ್ಯ, ಪ್ರಧಾನ ಕಾರ್ಯದರ್ಶಿ ರವೀಶ್, ನಾಗರಾಜ್, ನರಸಿಂಹಮೂರ್ತಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.