ಮಂಗಳವಾರ, ಅಕ್ಟೋಬರ್ 27, 2020
28 °C

ಖಾಸಗಿ ಶಾಲಾ ಶುಲ್ಕ ಮನ್ನಾಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಕೊರೊನಾ ಕಾರಣದಿಂದ ಜನರು ಸಂಕಷ್ಟದ ದಿನಗಳನ್ನು ಎದುರಿಸುತ್ತಿರುವ ಕಾರಣ ಖಾಸಗಿ ಶಾಲೆಗಳು ವಿದ್ಯಾರ್ಥಿಗಳ ಶುಲ್ಕ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಪೀಸ್ ಆರ್ಗನೈಜೇಷನ್ ಕಾರ್ಯಕರ್ತರು ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಕೊರೊನಾ ಕಾರಣಕ್ಕೆ ಲಾಕ್‍ಡೌನ್ ಆಗಿದ್ದು ಇತಿಹಾಸ. ಲಾಕ್‍ಡೌನ್ ತೆರವಾಗಿದ್ದರೂ ಕೂಡ ಜನರು ಸಂಕಷ್ಟದಿಂದ ಪಾರಾಗಿಲ್ಲ. ಲಕ್ಷಾಂತರ ಜನರು ಕೆಲಸ ಕಳೆದುಕೊಂಡಿದ್ದಾರೆ. ದುಡಿಮೆ ಇಲ್ಲ. ಇಂತಹ ಸಮಯದಲ್ಲಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಲ್ಲಿ ಓದಿಸುತ್ತಿದ್ದಾರೆ. ಅವರಿಗೆ ಶುಲ್ಕ ಕಟ್ಟಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಶಾಲಾ ಶುಲ್ಕವನ್ನು ಮನ್ನಾ ಮಾಡಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಮಕ್ಕಳನ್ನು ಖಾಸಗಿ ಶಾಲೆಗಳಲ್ಲಿ ಓದಿಸುತ್ತಿರುವ ಪೋಷಕರು ಈಗ ಸರ್ಕಾರಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಆದರೆ, ಖಾಸಗಿ ಶಾಲೆಗಳ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ವರ್ಗಾವಣೆ ಪತ್ರ, ಅಂಕಪಟ್ಟಿ ನೀಡುತ್ತಿಲ್ಲ. ಇದರಿಂದ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಹಿಂಸೆಯಾಗುತ್ತಿದೆ ಎಂದು ಆರೋಪಿಸಿದರು.

ಸಂಘಟನೆಯ ಮುಖಂಡರಾದ ರಿಯಾಜ್ ಅಹಮದ್, ಸಲೀಂ ಅಹಮ್ಮದ್, ನಾಗರಾಜ್, ಬಷೀರ್, ಶಫೀ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು