ಸೋಮವಾರ, ನವೆಂಬರ್ 29, 2021
20 °C

ನಳೀನ್ ಕುಮಾರ್ ಕಟೀಲ್‌ ವಿರುದ್ಧ ಶಿವಮೊಗ್ಗ ಯುವ ಕಾಂಗ್ರೆಸ್ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ವಿರುದ್ಧ  ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಗೋಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಬಿಜೆಪಿ ನಾಯಕರು ಬಾಲಿಶತನ ಹಾಗೂ ಜೋಕರ್ ಹೇಳಿಕೆ ನೀಡುತ್ತಿದ್ದಾರೆ. ದೇಶದಲ್ಲಿ ಬಿಜೆಪಿ ಸಂಸ್ಕೃತಿ ಜೋಕರ್ ಸಂಸ್ಕೃತಿಯತ್ತ ಸಾಗಿದೆ. ನಳಿನ್ ಕುಮಾರ್ ಕಟೀಲ್ ಅವರನ್ನು ಸಂಸದ ಸ್ಥಾನ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಪ್ರವೀಣ್ ಕುಮಾರ್,  ಜಿಲ್ಲಾ ಘಟಕದ ಎಚ್.ಪಿ.ಗಿರೀಶ್, ಬ್ಲಾಕ್ ಯುವ ಕಾಂಗ್ರೆಸ್‌ನ ಎಸ್.ಕುಮಾರೇಶ್, ಕಾರ್ಯದರ್ಶಿ ಎಂ ರಾಹುಲ್, ಪುಷ್ಪಕ್ ಕುಮಾರ್ , ಯುವ ಕಾಂಗ್ರೆಸ್ ಮುಖಂಡ ಟಿ.ವಿ.ರಂಜಿತ್ , ಶ್ರೀನಿವಾಸ್ ,ರಾಹುಲ್, ಪವನ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು