ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುವೆಂಪುಗೆ ಅವಮಾನ: ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮಕ್ಕೆ ಆಗ್ರಹ

Last Updated 1 ಜೂನ್ 2022, 4:25 IST
ಅಕ್ಷರ ಗಾತ್ರ

ಸಾಗರ: ರಾಷ್ಟ್ರಕವಿ ಕುವೆಂಪು ಹಾಗೂ ನಾಡಗೀತೆಗೆ ಅವಮಾನ ಎಸಗಿರುವ ಪಠ್ಯಪುಸ್ತಕ ರಚನಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ಆ ಸ್ಥಾನದಿಂದ ವಜಾಗೊಳಿಸಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಒಕ್ಕಲಿಗ ಸಮಾಜದ ಅಧ್ಯಕ್ಷ ಎಂ.ಟಿ. ಗುಂಡಪ್ಪ ಗೌಡ ಒತ್ತಾಯಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕುವೆಂಪು ರಚಿಸಿರುವ ನಾಡಗೀತೆ ಜೈ ಭಾರತ ಜನನಿಯ ತನುಜಾತೆ ಗೀತೆಯ ಬಗ್ಗೆ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಚಕ್ರತೀರ್ಥ ಅವರ ನಡೆಯನ್ನು ಒಕ್ಕಲಿಗ ಸಮಾಜ ಸಹಿಸುವುದಿಲ್ಲ’ ಎಂದು ಹೇಳಿದರು.

ಆದಿಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದ ಶ್ರೀ ಅವರು ಸರ್ಕಾರಕ್ಕೆ ಪತ್ರ ಬರೆದು ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಕುವೆಂಪು ಅವರಿಗೆ ಅವಮಾನ ಎಸಗಿರುವ ಘಟನೆಯನ್ನು ಪಕ್ಷಾತೀತವಾಗಿ ಎಲ್ಲರೂ ಖಂಡಿಸಿದ್ದಾರೆ. ಹೀಗಾಗಿ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು. ಒಕ್ಕಲಿಗರ ಸಂಘದ ಪ್ರಮುಖರಾದ ಎನ್. ರಮೇಶ್, ಬಸವರಾಜ್, ಭಾಗೀರಥಿ, ವೆಂಕಟರಮಣ ಗೌಡ, ಶೇಷಗಿರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT