ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಠ್ಯಕ್ರಮ ಪರಿಷ್ಕರಣೆ, ಕುವೆಂಪು ಅಪಮಾನ ವಿರೋಧಿಸಿ ಕವಿಶೈಲದಿಂದ ಪಾದಯಾತ್ರೆ ಆರಂಭ

ಕಿಮ್ಮನೆ ನೇತೃತ್ವ: ಹಂಸಲೇಖ, ನಾ.ಡಿಸೋಜ, ಎಸ್.ಜಿ.ಸಿದ್ದರಾಮಯ್ಯ ಭಾಗಿ
Last Updated 15 ಜೂನ್ 2022, 4:22 IST
ಅಕ್ಷರ ಗಾತ್ರ

ಶಿವಮೊಗ್ಗ:ಬರಗೂರು ರಾಮಚಂದ್ರಪ್ಪ ಸಮಿತಿಯ ಪಠ್ಯ ಪುಸ್ತಕಗಳನ್ನೇ ಮುಂದುವರೆಸಬೇಕು. ರಾಷ್ಟ್ರಕವಿ ಕುವೆಂಪು ಅವರನ್ನು ಅಪಮಾನಿಸಿರುವ ರೋಹಿತ್ ಚಕ್ರತೀರ್ಥ ವಿರುದ್ಧ ಎಫ್ ಐಆರ್ ದಾಖಲಿಸಿ ಅವರನ್ನು ಬಂಧಿಸಬೇಕು. ಪಠ್ಯಪುಸ್ತಕ ಸಮಿತಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಕಿಮ್ಮನೆ ರತ್ನಾಕರ ನೇತೃತ್ವದಲ್ಲಿ ಕುವೆಂಪು ಹುಟ್ಟೂರು ಕುಪ್ಪಳ್ಳಿಯ ಕವಿಶೈಲದಿಂದ ತೀರ್ಥಹಳ್ಳಿವರೆಗೆ ಬುಧವಾರ ಬೆಳಿಗ್ಗೆ ಪಾದಯಾತ್ರೆ ಆರಂಭವಾಗಿದೆ.

ಪಾದಯಾತ್ರೆಗೆ ನಾಡಿನ ಹಿರಿಯ ಸಾಹಿತಿಗಳು, ಕನ್ನಡ ಪರ ಸಂಘಟನೆಗಳು, ಪ್ರಗತಿಪರರು ಸಾಥ್ ನೀಡಿದ್ದಾರೆ.

ಕುಪ್ಪಳ್ಳಿಯ ಕವಿಶೈಲದಲ್ಲಿ ಕುವೆಂಪುರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕಿಮ್ಮನೆ ರತ್ನಾಕರ, ಬೆಳಿಗ್ಗೆ ಪಾದಯಾತ್ರೆ ಆರಂಭಿಸಿದರು.

ಈ ವೇಳೆ ಸುದ್ದಿಗಾರೊಂದಿಗೆ ಮಾತನಾಡಿದ ಕಿಮ್ಮನೆ ರತ್ನಾಕರ, ರೋಹಿತ್ ಚಕ್ರವರ್ತಿ ಮತ್ತು ಶಿಕ್ಷಣ ಸಚಿವ ನಾಗೇಶ್ ಸೇರಿ ಪಠ್ಯಪುಸ್ತಕಗಳನ್ನು ಅದ್ವಾನ ಮಾಡಿದ್ದಾರೆ. ಮಕ್ಕಳಿಗೆ ಆ ಪುಸ್ತಕಗಳ ವಿತರಣೆ ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿಯವರು ಹೊಸ ಹೊಸ ಕಾರ್ಯಕ್ರಮಗಳ ಅನುಷ್ಠಾನಗೊಳಿಸಲು ನಮ್ಮ ವಿರೋಧವಿಲ್ಲ. ಆದರೆ ಚರ್ಚೆ ನಡೆಸಬೇಕು. ಸದನದಲ್ಲಿ ಆ ಬಗ್ಗೆ ಚರ್ಚೆ ಆಗಬೇಕು. ವಿಷಯವಾರು ಸಮಿತಿ ರಚನೆ ಮಾಡಿ ಇಂತಹ ವಿಷಯವನ್ನು ಜಾರಿಗೊಳಿಸುತ್ತೇವೆ ಎಂಬುದನ್ನ ತಿಳಿಸಿ ನಂತರ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.

ಸಂಗೀತ ನಿರ್ದೇಶಕ ಹಂಸಲೇಖ, ಸಾಹಿತಿಗಳಾದ ಜಿ.ಸಿದ್ದರಾಮಯ್ಯ,ಪ್ರೊ. ರಾಜೇಂದ್ರ ಚೆನ್ನಿ, ನಾ.ಡಿಸೋಜ, ಹಿರಿಯ ಪತ್ರಕರ್ತ ದಿನೇಶ ಅಮಿನಮಟ್ಟು, ಡಿಎಸ್ ಎಸ್ ರಾಜ್ಯ ಸಂಚಾಲಕ ಗುರು ಮೂರ್ತಿ, ರೈತ ಸಂಘಟನೆಯ ಕೆ.ಟಿ.ಗಂಗಾಧರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಮಂಜುನಾಥ್, ವಕೀಲ ಕೆ.ಪಿ.ಶ್ರೀಪಾಲ್ ಕಿಮ್ಮನೆ ಅವರೊಂದಿಗೆ ಹೆಜ್ಜೆ ಹಾಕಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT