ಸಾಗರ: ತಾಲ್ಲೂಕಿನ ಭಾರಂಗಿ ಹೋಬಳಿ ಸೇರಿದಂತೆ ತಾಲ್ಲೂಕು ಕೇಂದ್ರದಿಂದ ದೂರದ ಪ್ರದೇಶದಲ್ಲಿರುವ ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಗುರುವಾರ ಕರ್ನಾಟಕ ಅರಣ್ಯಮೂಲ ಬುಡಕಟ್ಟು ಒಕ್ಕೂಟ ಹಾಗೂ ರೈತ ಸಂಘದ ವತಿಯಿಂದ ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಭಾರಂಗಿ ಹೋಬಳಿ ಇಂದ್ರೋಡಿ ಮನೆ ಶಾಲೆಯಿಂದ ಕುಡುಗುಂಜಿಯವರೆಗೆ 10 ಕಿ.ಮೀ. ದೂರದ ರಸ್ತೆ ಡಾಂಬರೀಕರಣಗೊಳಿಸುವಂತೆ ದೀರ್ಘಕಾಲದಿಂದ ಒತ್ತಾಯಿಸುತ್ತಿದ್ದರೂ ತಾಲ್ಲೂಕು ಆಡಳಿತ ಅದಕ್ಕೆ ಸ್ಪಂದಿಸಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ಕುಡುಗುಂಜಿ, ಸುಂಕದಮನೆ, ಕೆರೋಡಿ, ಐತಾಳಮನೆ, ವಟ್ಟಕ್ಕಿ, ಹೆನ್ನಿ ಮೊದಲಾದ ಗ್ರಾಮಗಳು ರಸ್ತೆ, ಕುಡಿಯುವ ನೀರು, ವಿದ್ಯುತ್ ಮೊದಲಾದ ಮೂಲ ಸೌಕರ್ಯಗಳ ಕೊರತೆಯಿಂದ ಬಳಲುತ್ತಿವೆ. ಈ ಹಿಂದೆ ಶಂಕುಸ್ಥಾಪನೆ ನೆರವೇರಿಸಿದ ರಸ್ತೆ ಕಾಮಗಾರಿ ಇನ್ನೂ ಆರಂಭಗೊಂಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ಹಿಂದಿನ ಶಾಸಕರು ಶಂಕುಸ್ಥಾಪನೆ ನೆರವೇರಿಸಿದ್ದಾರೆ ಎಂದು ಈಗಿನ ಶಾಸಕರು ಕಾಮಗಾರಿ ನಡೆಸಲು ಆಸಕ್ತಿ ತೋರುತ್ತಿಲ್ಲ. ಇದರಿಂದಾಗಿ ಭಾರಂಗಿ ಹೋಬಳಿಯ ಅನೇಕ ಗ್ರಾಮಗಳ ಜನರು ಮೂಲ ಸೌಕರ್ಯಗಳ ಕೊರತೆಯಿಂದ ನಲುಗಿ ಹೋಗಿದ್ದಾರೆ ಎಂದು ಪ್ರತಿಭಟನಾಕಾರರು ತಮ್ಮ ಅಹವಾಲು ಮಂಡಿಸಿದರು.

ಕರ್ನಾಟಕ ಅರಣ್ಯಮೂಲ ಬುಡಕಟ್ಟು ಒಕ್ಕೂಟದ ಜಿಲ್ಲಾ ಸಂಚಾಲಕ ರಾಮಣ್ಣ ಹಸಲರು, ರೈತ ಸಂಘದ ತಾಲ್ಲೂಕು ಅಧ್ಯಕ್ಷ ಮಂಜಪ್ಪ ಹಿರೇನೆಲ್ಲೂರು, ದೇವು ಆಲಳ್ಳಿ, ಹೊಯ್ಸಳ ಗಣಪತಿಯಪ್ಪ, ನಾಗರಾಜ್, ಲಕ್ಷ್ಮಮ್ಮ ಹಿರೇಮನೆ, ಈಶ್ವರಪ್ಪ, ಶಿಲ್ಪಾ, ಗಣೇಶ್ ಇದ್ದರು.

ಬಾಕ್ಸ್ : ರಸ್ತೆ ಹಾಳಾಗಿರುವುದರಿಂದ ಭಾರಂಗಿ ಹೋಬಳಿಯ ಗ್ರಾಮಸ್ಥರು ಕೈಕಾಲು ಮುರಿದುಕೊಂಡು ಆಸ್ಪತ್ರೆ ಸೇರುತ್ತಿದ್ದಾರೆ. ತಾಲ್ಲೂಕು ಕೇಂದ್ರಕ್ಕೆ ಬರಲು ಗ್ರಾಮಸ್ಥರು ಹರಸಾಹಸ ಮಾಡಬೇಕಾಗಿದೆ.

ರಾಮಣ್ಣ ಹಸಲರು, ಜಿಲ್ಲಾ ಸಂಚಾಲಕ, ಕರ್ನಾಟಕ ಅರಣ್ಯಮೂಲ ಬುಡಕಟ್ಟು ಒಕ್ಕೂಟ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.