ಸೋಮವಾರ, ನವೆಂಬರ್ 30, 2020
20 °C

ಕ್ರೈಸ್ತರ ಮೇಲೆ ನಡೆದ ಹಲ್ಲೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಕ್ರೈಸ್ತರ ಮೇಲೆ ನಡೆದ ಹಲ್ಲೆ ಖಂಡಿಸಿ ಜಿಲ್ಲಾ ಕ್ರೈಸ್ತ ಒಕ್ಕೂಟ, ಜಿಲ್ಲಾ ಫಾಸ್ಟರ್ ಫೆಲೋಶಿಪ್, ಅಖಿಲ ಭಾರತ ಕ್ರೈಸ್ತ ಮಹಾಸಭಾ, ಅಖಿಲ ಕರ್ನಾಟಕ ಫಾಸ್ಪರ್ ಮತ್ತು ಲೀಡರ್ ಫೆಲೋಶಿಪ್ ಮತ್ತಿತರ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ಸೊರಬ, ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ನಡೆಸುತ್ತಿದ್ದ ಕ್ರೈಸ್ತರ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ.

ಸರ್ಕಾರದ ಜವಾಬ್ದಾರಿ ಸ್ಥಾನದಲ್ಲಿರುವ ಕೆಲವು ಜನಪ್ರತಿನಿಧಿಗಳು ಕುಮ್ಮಕ್ಕು ನೀಡುವ ಮೂಲಕ ಸಮಾಜದ ಶಾಂತಿಗೆ ಭಂಗ ತರುತ್ತಿರುದ್ದಾರೆ. ಕ್ರೈಸ್ತ ಗುರುಗಳು, ನಾಯಕರುಗಳು ಬಲವಂತವಾಗಿ ಹಾಗೂ ಆಮಿಷ ಒಡ್ಡಿ ಮತಾಂತರ ಮಾಡುತ್ತಿದ್ದಾರೆ ಎಂದು ಆಪಾದಿಸುತ್ತಿದ್ದಾರೆ. ಅಂತಹ ನಿರ್ದಿಷ್ಟ ಪ್ರಕರಣಗಳು ಇದ್ದರೆ ದೂರು ನೀಡಲಿ. ಆದರೆ, ಕಾನೂನು ಕೈಗೆತ್ತಿಕೊಂಡು ಹಲ್ಲೆ ಮಾಡುವುದು ಸಲ್ಲದು ಎಂದು ಖಂಡಿಸಿದರು.

ಹಲ್ಲೆಗೆ ಒಳಗಾದ ದೇವರ ಸೇವಕರು ಪೊಲೀಸರಿಗೆ ದೂರು ನೀಡಿದಾಗ, ದೂರು ಸ್ವೀಕರಿಸದೆ ಏಕ ಪಕ್ಷೀಯವಾಗಿ ಹಲ್ಲೆಗೊಳಗಾದವರ ಮೇಲೆ ಎಫ್‌ಐಆರ್ ದಾಖಲಿಸಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಶಾಂತಿಯುತವಾಗಿ ಕ್ರೈಸ್ತರು ಪ್ರಾರ್ಥನೆ ಸಲ್ಲಿಸಲು ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು