ಸೋಮವಾರ, ಡಿಸೆಂಬರ್ 5, 2022
21 °C

ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಕೆ.ಎಸ್.ಆರ್.ಟಿ.ಸಿ ಬಸ್ ಸೌಲಭ್ಯ ಒದಗಿಸಿಕೊಡುವಂತೆ ಆಗ್ರಹಿಸಿ ಗ್ರಾಮೀಣ ಹೋರಾಟ ಸಮಿತಿಯಿಂದ ಸೋಮವಾರ ಜಿಲ್ಲಾಧಿಕಾರಿ  ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ತೀರ್ಥಹಳ್ಳಿ ತಾಲ್ಲೂಕು ಆಗುಂಬೆ ಹೋಬಳಿಯ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಗೂ ಅತಿ ಹಿಂದುಳಿದ ಪ್ರದೇಶಾಭಿವೃದ್ಧಿ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರುವ ಕೋರನಕೋಟೆ, ಹುರುಳಿ, ಶಿವಳ್ಳಿ, ಶುಂಠಿಹಕ್ಲು ಗ್ರಾಮಗಳಿಗೆ ಸರ್ಕಾರಿ ಬಸ್ ಸೌಲಭ್ಯವಿಲ್ಲದೇ ವಿದ್ಯಾರ್ಥಿಗಳು, ನಾಗರಿಕರು ಸುಮಾರು 10 ಕಿ.ಮೀ ಕಾಲುನಡಿಗೆ ಅಥವಾ ಖಾಸಗಿ ವಾಹನದ ಮೂಲಕ ಸಂಚರಿಸಬೇಕಾದ ಪರಿಸ್ಥಿತಿ ಬಂದೊದಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಭಾಗದ ಗ್ರಾಮಗಳಲ್ಲಿ ವರಾಹಿ ಮುಳುಗಡೆ ಸಂತ್ರಸ್ತರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿದ್ದು, ಕೋರನಕೋಟೆ, ನಾಲೂರು, ಮೇಗರವಳ್ಳಿ ಮಾರ್ಗವಾಗಿ ತೀರ್ಥಹಳ್ಳಿಗೆ ಬೆಳಿಗ್ಗೆ ಮಧ್ಯಾಹ್ನ ಮತ್ತು ಸಂಜೆ ಸಮಯಕ್ಕೆ ಮೂರು ಟ್ರಿಪ್ ಕೆಎಸ್‍ಆರ್‌ಟಿಸಿ ಬಸ್ ಸೌಲಭ್ಯ ಒದಗಿಸಿಕೊಡುವ ಮೂಲಕ ಈ ಭಾಗದ ವಿದ್ಯಾರ್ಥಿಗಳಿಗೆ, ಕೂಲಿ ಕಾರ್ಮಿಕರಿಗೆ, ರೈತರಿಗೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಸಂದೀಪ್ ಗೌಡ, ಪ್ರಮುಖರಾದ ಬಿ.ಎ. ರಮೇಶ್ ಹೆಗ್ಡೆ, ಆದರ್ಶ, ಸತೀಶ್, ರಮೇಶ್ ಶೆಟ್ಟಿ, ಮತ್ತಿತರರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು