ಶಿವಮೊಗ್ಗ: ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣ ಮತ್ತು ಅಧಿಕಾರಿಯ ಆತ್ಮಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಜೂನ್ 28ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಹೇಳಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ಬಾರದೆ ಈ ಹಗರಣ ನಡೆಯಲು ಸಾಧ್ಯವಿಲ್ಲ. ಇವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಪಡೆದರೆ ಅಷ್ಟೇ ಸಾಲದು, ಇದರ ಹಿಂದೆ ಕಾಣದ ಕೈಗಳ ಕೈವಾಡವಿದೆ. ಅದು ಬಹಿರಂಗವಾಗಬೇಕು. ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ಪ್ರಮುಖರಾದ ಜಯರಾಮ್, ಕೆ.ಬಿ. ಅಣ್ಣಪ್ಪ, ಧನಂಜಯಕುಮಾರ್, ಜಿ. ಗುಡ್ಡಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.