ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರಿಗೆ ಕಳಪೆ ಮಾಂಸ ಪೂರೈಕೆ; ಕ್ರಮಕ್ಕೆ ಆಗ್ರಹ

-
Published : 2 ಆಗಸ್ಟ್ 2024, 15:37 IST
Last Updated : 2 ಆಗಸ್ಟ್ 2024, 15:37 IST
ಫಾಲೋ ಮಾಡಿ
Comments

ಶಿವಮೊಗ್ಗ: ಬೆಂಗಳೂರು ನಗರಕ್ಕೆ ಕಳಪೆ ಮಾಂಸ ಪೂರೈಸುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮೇಲೆ ದೌರ್ಜನ್ಯ ಎಸಗಿದ ಎಸಿಪಿ ಚಂದನ್ ಕುಮಾರ್ ಅವರನ್ನು ಅಮಾನತುಗೊಳಿಸಬೇಕು ಎಂದು ಇಲ್ಲಿನ ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಆಗ್ರಹಿಸಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದ ಸಮಿತಿಯ ಪದಾಧಿಕಾರಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಬೆಂಗಳೂರಿನ ರೆಸ್ಟೋರೆಂಟ್ ಮತ್ತು ಪ್ರತಿಷ್ಠಿತ ಹೋಟೆಲ್‌ಗಳಿಗೆ ಬಸ್ ಮತ್ತು ರೈಲುಗಳ ಮೂಲಕ ಅಕ್ರಮವಾಗಿ ಮಾಂಸ ಪೂರೈಕೆ ಆಗುತ್ತಿದೆ. ಆಹಾರ ಇಲಾಖೆ ನಿಯಮ ಉಲ್ಲಂಘನೆ ಮಾಡಿ ಮಾಂಸ ಕೆಡದಂತೆ ಅವೈಜ್ಞಾನಿಕವಾಗಿ ರಾಸಾಯನಿಕಗಳನ್ನು ಬೆರೆಸಿ ಪೂರೈಕೆ ಮಾಡಲಾಗುತ್ತಿದೆ ಎಂದು ದೂರಿದರು.

ಮಾಂಸ ಸೇವಿಸುವವರ ಆರೋಗ್ಯದ ದೃಷ್ಟಿಯಿಂದ ಇದು ಜೀವಕ್ಕೆ ಹಾನಿಕರ.  ಇಂತಹ ಅಕ್ರಮ ಮಾಂಸ ‍ಪೂರೈಕೆ ದಂಧೆಕೋರರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ದೂರು ನೀಡಿದ ಪುನೀತ್ ಕೆರೆಹಳ್ಳಿ ಮೇಲೆ ಎಸಿಪಿ ಚಂದನ್ ಕುಮಾರ್ ಅವರು ಶಾಂತಿ ಭಂಗ, ಕರ್ತವ್ಯಕ್ಕೆ ಅಡ್ಡಿ ಎಂದು ಪ್ರಕರಣ ದಾಖಲಿಸಿದ್ದು, ಬಂಧಿಸಿ ಠಾಣೆಯಲ್ಲಿ ನಗ್ನ ಮಾಡಿ ವಿಡಿಯೊ ಮಾಡಿ ಬರ್ಬರವಾಗಿ ಹಲ್ಲೆ ಮಾಡಿದ್ದಾರೆ.
ಇದು ಮಾನವ ಹಕ್ಕು ಉಲ್ಲಂಘನೆಯಾಗಿದೆ. ಚಂದನ್ ಕುಮಾರ್ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
 
ಈ ಸಂದರ್ಭದಲ್ಲಿ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟದಿಂದ ವಿಜಯ್ ರೇವಣಕರ್, ನವೀನ್, ಶಿವಶಂಕರ್ ನಾಯಕ್, ದಿನೇಶ್ ಚೌಹಾಣ್, ಮುಕುಂದ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT