ಸೋಮವಾರ, ಆಗಸ್ಟ್ 15, 2022
24 °C

‘ಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಿ’: ಜಿಲ್ಲಾಧಿಕಾರಿಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಅಲೆಮಾರಿಗಳಿಗೆ ಶಾಶ್ವತ ವಸತಿ ಕಲ್ಪಿಸಬೇಕು ಎಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ ನೇತೃತ್ವದಲ್ಲಿ ಸಾಗರ ರಸ್ತೆ ಶ್ರೀರಾಂಪುರ ಹಕ್ಕಿಪಿಕ್ಕಿ ಸಮುದಾಯದ ಜನರು ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಸಾಗರ ರಸ್ತೆಯ ಶ್ರೀರಾಂಪುರ ಸಮೀಪದ ಖಾಸಗಿ ಜಮೀನಿನಲ್ಲಿ ತಾತ್ಕಾಲಿಕ ಜೋಪಡಿ ಹಾಕೊಕೊಂಡು ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ವಾಸಮಾಡುತ್ತಿವೆ. ಹೊಟ್ಟೆಪಾಡಿಗಾಗಿ ಬೀದಿ ವ್ಯಾಪಾರ ಮಾಡುತ್ತಾರೆ. ಪೆನ್ನು ಮಾರಾಟ ಮಾಡಲು ಹೋದವರನ್ನು ಭಿಕ್ಷುಕರು ಎಂದು ರಿಮ್ಯಾಂಡ್ ಹೋಂಗೆ ಕಳುಹಿಸಿದ್ದರು ಎಂದು ದೂರಿದರು.

ಜಿಲ್ಲಾಡಳಿತ ಈ ಅಲೆಮಾರಿಗಳಿಗಾಗಿ ವೀರಣ್ಣನಬೆನವಳ್ಳಿ ಗ್ರಾಮದ ಸರ್ವೆ ನಂಬರ್ 78ರಲ್ಲಿ 4 ಎಕರೆ ಜಮೀನು ನೀಡಿದೆ. ಆದರೆ, ಅಲ್ಲಿ ಯಾವುದೇ ಮೂಲ ಸೌಲಭ್ಯಗಳಿಲ್ಲ. ಅಲ್ಲಿ ಸೌಕರ್ಯ ಕಲ್ಪಿಸಬೇಕು. ಪಡಿತರ, ಆಧಾರ್ ಕಾರ್ಡ್ ನೀಡಬೇಕು. ಮನೆ ಕಟ್ಟಿಸಿಕೊಡಬೇಕು. ಮತದಾನದ ಹಕ್ಕು ಕೊಡಬೇಕು, ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಕಾರ್ಯಕ್ರಮ ರೂಪಿಸಬೇಕು. ರುದ್ರಭೂಮಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.
ಬಿಎಸ್‌ಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಡಿ.ಶಿವಪ್ಪ, ಮುಖಂಡರಾದ ಮಾರುತಿ, ತಮ್ಮಡಿಹಳ್ಳಿ ಲೋಕೇಶ್, ರಾಜು, ರವಿ, ಲಕ್ಷ್ಮಿಪತಿ, ಗೌರಮ್ಮ, ರೂಪಾ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು