ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ 23.57 ಲಕ್ಷ ಮನೆಗಳಿಗೆ ನಲ್ಲಿಗಳ ಮೂಲಕ ನೀರು ಪೂರೈಕೆ: ಕೆ.ಎಸ್.ಈಶ್ವರಪ್ಪ

Last Updated 3 ನವೆಂಬರ್ 2020, 14:56 IST
ಅಕ್ಷರ ಗಾತ್ರ

ಶಿವಮೊಗ್ಗ: ಪ್ರಸಕ್ತ ವರ್ಷ ರಾಜ್ಯದ 23.57 ಲಕ್ಷ ಮನೆಗಳಿಗೆ ನಲ್ಲಿಗಳ ಮೂಲಕ ನೀರು ತಲುಪಿಸುವ ಗುರಿ ಹೊಂದಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕೇಂದ್ರ ಜಲಶಕ್ತಿ ಸಚಿವರ ಜತೆ ನಡೆದ ವಿಡಿಯೊ ಸಂವಾದಲ್ಲಿ ಅವರು ಮಾತನಾಡಿದರು.

ಈಗಾಗಲೇ ರಾಜ್ಯದಲ್ಲಿ 24.72 ಲಕ್ಷ ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ಮನೆಮನೆಗೆ ಗಂಗೆ ಯೋಜನೆಗಾಗಿ ಕೇಂದ್ರ ಸರ್ಕಾರ ₹4,093 ಕೋಟಿ, ರಾಜ್ಯ ಸರ್ಕಾರ ₹3,982 ಕೋಟಿ ನೀಡುತ್ತಿವೆ. ರಾಜ್ಯದ 29,963 ಶಾಲೆಗಳಿಗೆ ಶುದ್ಧ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. 1,595 ಶಾಲೆಗಳಿಗೆ ಶೀಘ್ರ ವ್ಯವಸ್ಥೆ ಮಾಡಲಾಗುವುದು. 61,799 ಅಂಗನವಾಡಿಗಳು, 1311 ಹಾಸ್ಟೆಲ್‌ಗಳಿಗೂ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ವಿವರ ನೀಡಿದರು.

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಾಧನೆ ಮಾಡಿದ ವ್ಯಕ್ತಿಗಳಿಗೇ ಸರ್ಕಾರ ಪ್ರಶಂಸನಾ ಪತ್ರ ನೀಡುತ್ತಿದೆ. ಖಾತ್ರಿ ಯೋಜನೆ ಮೂಲಕ ಗ್ರಾಮೀಣ ಜನರಿಗೆ ಉದ್ಯೋಗದ ಭರವಸೆ ದೊರೆತಿದೆ ಎಂದರು.

ಇಲಾಖೆಯ ಪ್ರಧಾನ ಕಾರ್ಯದರ್ಶಿ ಅತೀಕ್ ಅಹಮದ್, ವಿಶೇಷಾಧಿಕಾರಿ ಜಯರಾಮ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT