ಶಿವಮೊಗ್ಗ:ಪಿಯು ವಿದ್ಯಾರ್ಥಿಗಳಿಗಾಗಿ 129 ಮಾರ್ಗಗಳಲ್ಲಿ133 ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಬಸ್‍ನಲ್ಲೂನೋಡಲ್ ಅಧಿಕಾರಿ ನೇಮಕ ಮಾಡಲಾಗಿದ್ದು,ವಿದ್ಯಾರ್ಥಿಗಳನ್ನು ಕ್ಷೇಮ ನೋಡಿಕೊಳ್ಳಲಿದ್ದಾರೆಎಂದುಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಸಭಾಂಗಣದಲ್ಲಿ ಬುಧವಾರ ನಡೆದ ಪರೀಕ್ಷಾಸಿದ್ಧತೆಗಳ ಪರಿಶೀಲನಾ ಸಭೆಯ ಬಳಿಕ ಅವರುಸುದ್ದಿಗಾರರ ಜತೆಮಾತನಾಡಿದರು.

ಪಿಯು ಪರೀಕ್ಷೆ ನಡೆಯಲಿರುವ ಎಲ್ಲಾ 33 ಕೇಂದ್ರಗಳನ್ನೂ ಎರಡು ಬಾರಿ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಪರೀಕ್ಷೆಗೆ ಕೊಠಡಿ ಹಸ್ತಾಂತರಿಸುವ ಪೂರ್ವದಲ್ಲಿ ಇನ್ನೊಮ್ಮೆ ಸ್ಯಾನಿಟೈಸ್ ಮಾಡಲು ಸೂಚಿಸಲಾಗಿದೆ. ಪ್ರತಿ ವಿದ್ಯಾರ್ಥಿಗೂ ಇಲಾಕೆಯೇ ಮಾಸ್ಕ್ ಒದಗಿಸಬೇಕು. ದೂರದಿಂದ ಬರುವ ವಿದ್ಯಾರ್ಥಿಗಳಿಗೆ ನೀರು ಹಾಗೂ ಬಿಸ್ಕಿಟ್ ಪ್ಯಾಕೇಟ್ ನೀಡಲು ಸೂಚಿಸಲಾಗಿದೆ ಎಂದರು.

ದ್ವಿತೀಯ ಪಿಯು ಮತ್ತು ಎಸ್ಸೆಸ್ಸೆಲ್ಸಿಪರೀಕ್ಷೆ ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ ಸಂಪೂರ್ಣ ಸಿದ್ಧವಾಗಿದೆ.ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲೂ ಲೋಪವಾಗದಂತೆ ಮುನ್ನಚ್ಚರಿಕೆ ವಹಿಸಬೇಕು. ಒಟ್ಟು 84 ಕೇಂದ್ರಗಳಿವೆ.ಗ್ರಾಮೀಣ ಭಾಗದಲ್ಲಿ 40ಹಾಗೂ ನಗರ ಪ್ರದೇಶದಲ್ಲಿ 44 ಕೇಂದ್ರಗಳಿವೆ. ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆ ತರಲು 239 ಬಸ್‌ಗಳವ್ಯವಸ್ಥೆ ಮಾಡಲಾಗಿದೆ. 189 ರೂಟ್‍ಗಳಲ್ಲಿ ಒಟ್ಟು 336ನಿಲುಗಡೆಗುರುತಿಸಲಾಗಿದೆ. ವಿದ್ಯಾರ್ಥಿಗಳನ್ನು ಕರೆ ತರಲುಮಾರ್ಗದಬಸ್‍ಗಳನ್ನು ಹೊರತುಪಡಿಸಿ, ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದು ವಿವರ ನೀಡಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ,ಪಿಯು ಉಪ ನಿರ್ದೇಶಕನಾಗರಾಜ ಕಾಗಲಕರ್, ಡಿಡಿಪಿಐ ರಮೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.