ಮಂಗಳವಾರ, ಜೂನ್ 22, 2021
27 °C

ಮಕ್ಕಳನ್ನು ಕೂಡಿ ಹಾಕಿ, ತಾಯಿ ನೇಣಿಗೆ ಶರಣು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಪಟ್ಟಣದಲ್ಲಿ ಶನಿವಾರ ಮಕ್ಕಳನ್ನು ರೂಮಿನಲ್ಲಿ ಕೂಡಿ ಹಾಕಿ ಗೃಹಿಣಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಲ್ಲಿಯ ಶಾಂತಿನಗರ (ರಾಗಿಗಡ್ಡ)ದ ನಿವಾಸಿ ನಿರ್ಮಲಾ (36) ಆತ್ಮಹತ್ಯೆ ಮಾಡಿಕೊಂಡವರು. ಇವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡಿ ಇಬ್ಬರು ಮಕ್ಕಳನ್ನು ಸಾಕುತ್ತಿದ್ದರು. ಶನಿವಾರ ಮಕ್ಕಳೊಂದಿಗೆ ಜಗಳವಾಡಿಕೊಂಡು ಅವರನ್ನು ರೂಮಿನಲ್ಲಿ ಕೂಡಿ ಹಾಕಿ ಆನಂತರ ನೇಣು ಹಾಕಿಕೊಂಡಿದ್ದಾರೆ.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.