ಅವರಿಗೆ ಜುಲೈ 14ರಂದು ನಾಯಿ ಕಚ್ಚಿತ್ತು. ಆ ಸಮಯದಲ್ಲಿ ಸೂಕ್ತ ಚುಚ್ಚುಮದ್ದು ತೆಗೆದುಕೊಳ್ಳದ ಕಾರಣ ಸೋಂಕು ಉಲ್ಬಣಗೊಂಡಿತ್ತು.
ಆ. 20ರಂದು ಆರೋಗ್ಯದಲ್ಲಿ ಏರುಪೇರಾದ ಕಾರಣ ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಶುಕ್ರವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.