ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸವಳಂಗ ರಸ್ತೆ ಮೇಲ್ಸೇತುವೆ: ಬಿವೈಆರ್ ಪರಿಶೀಲನೆ

ದೋಷ ಸರಿಪಡಿಸಲು ರೈಲ್ವೆ ಅಧಿಕಾರಿಗಳಿಗೆ ಸೂಚನೆ
Published 19 ಜೂನ್ 2024, 14:39 IST
Last Updated 19 ಜೂನ್ 2024, 14:39 IST
ಅಕ್ಷರ ಗಾತ್ರ

ಶಿವಮೊಗ್ಗ: ಸವಳಂಗ ರಸ್ತೆ ಮೇಲ್ಸೇತುವೆಯ ಎರಡು ಬದಿಯಲ್ಲಿರುವ ಸರ್ವಿಸ್ ರಸ್ತೆಯ ಕಾಮಗಾರಿಯನ್ನು ಸಂಸದ ಬಿ.ವೈ. ರಾಘವೇಂದ್ರ ಹಿರಿಯ ರೈಲ್ವೆ ಅಧಿಕಾರಿಗಳೊಂದಿಗೆ ಬುಧವಾರ ವೀಕ್ಷಿಸಿದರು. 

ಮೇಲ್ಸೇತುವೆ ಕಾಮಗಾರಿ ಹಾಗೂ ಸರ್ವಿಸ್ ರಸ್ತೆಯಲ್ಲಿನ ಕಾಮಗಾರಿಗಳಲ್ಲಿ ಕೆಲ ಲೋ‍ಪಗಳಿವೆ ಎಂದು ನಿವಾಸಿಗಳಿಂದ ದೂರು ಬಂದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮೇಲ್ಸೇತುವೆ ಕೊನೆಗೊಳ್ಳುವ ಉಷಾ ನರ್ಸಿಂಗ್ ಹೋಂ ವೃತ್ತದಲ್ಲಿ ಭಾರಿ‌ ಸಂಚಾರ ಅವ್ಯವಸ್ಥೆ ಉಂಟಾಗುವ ಕಾರಣ ವೃತ್ತವನ್ನು ವಿಸ್ತರಿಸುವ ಮತ್ತು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಬಗ್ಗೆ ಚರ್ಚಿಸಲಾಯಿತು.

ಸರ್ವಿಸ್ ರಸ್ತೆಯ ಎರಡು ಬದಿಯಲ್ಲಿ ಮಳೆ ನೀರು ಹೋಗಲು ಮತ್ತು ಮೇಲ್ಸೇತುವೆಯಿಂದ ಕೆಳಗೆ ಬೀಳುವ ಮಳೆ ನೀರನ್ನು ತಡೆದು ಇಂಗಿಸಲು ಹಾಗೂ ಅಂಡರ್‌ಪಾಸ್‌ನಲ್ಲಿನ ಸಣ್ಣಪುಟ್ಟ ಸಮಸ್ಯೆಗಳ ಬಗೆಹರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿಧಾನಪರಿಷತ್ ಸದಸ್ಯ ಎಸ್. ರುದ್ರೇಗೌಡ, ರೈಲ್ವೆ ಮುಖ್ಯ ಎಂಜಿನಿಯರ್ ಪ್ರದೀಪ್ ಪುರಿ, ಮೂರ್ತಿರಾಜ್, ಹರ್ಷವರ್ಧನ್, ರಾಜ್‌ಕುಮಾರ್, ಸಿದ್ದಪ್ಪ, ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ, ಸ್ಮಾರ್ಟ್ ಸಿಟಿಯ ವಿಜಯ್‌ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT