ಸೋಮವಾರ, ಸೆಪ್ಟೆಂಬರ್ 27, 2021
28 °C

ಮಳೆ: 6 ಮನೆಗಳು ಕುಸಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ನಗರದ ಸವರ್‌ಲೈನ್‌ ರಸ್ತೆ ಬಳಿ ಈಚೆಗೆ ಸುರಿದ ಮಳೆಯಿಂದಾಗಿ ತೇವವಾಗಿದ್ದ 6 ಮನೆಗಳು ಶನಿವಾರ ಕುಸಿದು ಬಿದ್ದಿವೆ.

ಹೂ ಮಾರಾಟಗಾರರಾದ ರಾಧಾ, ಭಾಗ್ಯಮ್ಮ, ಭಾಗ್ಯಲಕ್ಷ್ಮಿ, ನಾಗಮ್ಮ, ರಂಗಮ್ಮ, ಗಾಯತ್ರಮ್ಮ ಎಂಬುವರ ಮನೆಗಳು ಬಿದ್ದಿವೆ. ಮಕ್ಕಳು ಹೊರಗಡೆ ಹೋಗಿದ್ದರಿಂದ ಯಾವುದೇ ಪ್ರಾಣಹಾನಿಯಾಗಿಲ್ಲ.

ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಪಾಲಿಕೆಯ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಹಾನಿಗೊಳಗಾದ ಮನೆಗಳನ್ನು ಪರಿಶೀಲಿಸಿದರು. ಮನೆ ಮಾಲೀಕರಿಗೆ ಸಾಂತ್ವನ ಹೇಳಿ ಕೂಡಲೇ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.