ಬುಧವಾರ, ಜುಲೈ 28, 2021
20 °C

ತೀರ್ಥಹಳ್ಳಿಯಲ್ಲಿ ತಗ್ಗಿದ ಮಳೆ: ತುಂಬಿದ ನದಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತೀರ್ಥಹಳ್ಳಿ: ವಾರದಿಂದ ಸತತವಾಗಿ ಸುರಿಯುತ್ತಿರುವ ಮಳೆ ತಾಲ್ಲೂಕಿನಲ್ಲಿ ಶುಕ್ರವಾರ ಕೊಂಚ ತಗ್ಗಿದೆ. ಆಗುಂಬೆಯಲ್ಲಿ 15.1 ಸೆಂ.ಮೀ. ಹಾಗೂ ತೀರ್ಥಹಳ್ಳಿ ಪಟ್ಟಣದಲ್ಲಿ 12.3 ಸೆಂ.ಮೀ. ಮಳೆ ಸುರಿದಿದೆ.

ತಾಲ್ಲೂಕಿನ ಜೀವನದಿಗಳಾದ ತುಂಗಾ, ಮಾಲತಿ, ಕುಶಾವತಿ ತುಂಬಿ ಹರಿಯುತ್ತಿವೆ. ಅಂಬುತೀರ್ಥದಲ್ಲಿ ಮನೆಯೊಂದರ ಚಾವಣಿ ಕುಸಿದಿದೆ.
ಮೂರು ದಿನಗಳಿಂದ ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಿದ್ದು, ಮೊಬೈಲ್ ನೆಟ್‌ವರ್ಕ್ ಸಂಪರ್ಕ ಕಡಿತಗೊಂಡಿದೆ.

ತಾಲ್ಲೂಕು ವ್ಯಾಪ್ತಿಯಲ್ಲಿ 4.38 ಗುಂಟೆ ಪ್ರದೇಶದ ಅಡಿಕೆ ಮರಕ್ಕೆ ಹಾನಿಯಾಗಿದೆ. ತೀರ್ಥಹಳ್ಳಿ ವಲಯದಲ್ಲಿ 217, ಬೆಜ್ಜವಳ್ಳಿ ವಲಯದಲ್ಲಿ 278 ವಿದ್ಯುತ್ ಕಂಬಗಳು ಉರುಳಿದ್ದು, ಒಟ್ಟು 72 ವಿದ್ಯುತ್ ಟ್ರಾನ್ಸ್‌ಫಾರ್ಮರ್ ಹಾಳಾಗಿವೆ ಎಂದು ಕಂದಾಯ ಇಲಾಖೆ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು