ಶನಿವಾರ, ಆಗಸ್ಟ್ 13, 2022
26 °C

ನಿರಂತರ ಮಳೆ; ಜನಜೀವನ ಅಸ್ತವ್ಯಸ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ನಗರಪಾಲಿಕೆ ವ್ಯಾಪ್ತಿಯ ಹಲವು ಬಡಾವಣೆಗಳ ರಸ್ತೆಗಳ ಮೇಲೆ ನೀರು ಹರಿಯುತ್ತಿದೆ. ಇದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಮಹಾನಗರ ಪಾಲಿಕೆ ಎದುರಿನ ರಸ್ತೆ ಸೇರಿ ಹಲವೆಡೆ ಮಳೆ ನೀರು ಚರಂಡಿ ಮೂಲಕ ಹರಿದುಹೋಗಲು ಸಾಧ್ಯವಾಗದೆ ರಸ್ತೆಗಳಲ್ಲೇ ನೀರು ಹಳ್ಳದಂತೆ ಹರಿಯುತ್ತಿತ್ತು. ರಾಜಕಾಲುವೆಗಳಲ್ಲೂ ನೀರು ಸರಾಗವಾಗಿ ಹರಿಯದೇ ಸಮಸ್ಯೆ ಎದುರಾಗಿತ್ತು. ಸ್ಮಾರ್ಟ್‌ ಸಿಟಿ ಕಾಮಗಾರಿಗೆ ಹಲವೆಡೆ ಗುಂಡಿ ಅಗೆದು ಬಿಟ್ಟಿರುವ ಪರಿಣಾಮ ಗುಂಡಿಗಳಲ್ಲಿ ನೀರು ತುಂಬಿಕೊಂಡು ಅಪಘಾತಗಳಾಗುತ್ತಿವೆ. ಗೋಪಾಳ ಬಡಾವಣೆಯ ಗುತ್ಯಪ್ಪ ಕಾಲೊನಿ ಬಳಿ ಗುರುವಾರ ತ್ರಿಚಕ್ರ ವಾಹನದಿಂದ ಬಿದ್ದು ಅಂಗವಿಕಲರೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ನಿತ್ಯವೂ ಹಲವು ಬಡಾವಣೆಗಳಲ್ಲಿ ಇಂತಹ ಸಮಸ್ಯೆ ಎದುರಾಗುತ್ತಿವೆ.

ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ ಅವರು ಪಾಲಿಕೆ ಸದಸ್ಯರು, ಅಧಿಕಾರಿಗಳ ಜತೆ ಹಲವು ಬಡಾವಣೆಗಳಿಗೆ ಭೇಟಿ ನೀಡಿ ರಾಜಕಾಲುವೆಗಳ ಸ್ಥಿತಿಗತಿ ಪರಿ ಶೀಲಿಸಿದರು. ನೀರು ಸರಾಗವಾಗಿ ಹರಿದು ಹೋಗಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು