ರಿಪ್ಪನ್ ಪೇಟೆ: ಪಟ್ಟಣದ ಸುತ್ತಮುತ್ತ ಗುರುವಾರ ಎಡಬಿಡದೆ ಸುರಿದ ಮಳೆಗೆ ಹರತಾಳು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಭಾರಿ ಅವಾಂತರಗಳು ಸೃಷ್ಟಿಯಾಗಿವೆ. ನಂಜವಳ್ಳಿ ಗ್ರಾಮದಲ್ಲಿ ಕೊಟ್ಟಿಗೆ ಮೇಲ್ಚಾವಣಿ ಕುಸಿದು ಬಿದ್ದ ಪರಿಣಾಮ ಇಂದಿರಾ(53) ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದುರ್ಘಟನಯಲ್ಲಿ ಮಹಿಳೆ ಎದೆಯ ಪಕ್ಕೆಲುಬು ಮುರಿದಿದೆ.

ರಸ್ತೆ ಸಂಪರ್ಕ ಸರಿಯಿಲ್ಲದ ಕಾರಣ ಸ್ಥಳೀಯರು ಮಹಿಳೆಯನ್ನು ಟ್ರ್ಯಾಕ್ಟರ್ ಮೂಲಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿ ಕೊಟ್ಟರು.

ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಹಾನಿ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.