ಮಂಗಳವಾರ, ಅಕ್ಟೋಬರ್ 19, 2021
23 °C

ಆನವಟ್ಟಿ: ಭಾರಿ ಮಳೆ, ಮನೆಗಳಿಗೆ ನುಗ್ಗಿದ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನವಟ್ಟಿ: ಪಟ್ಟಣದಲ್ಲಿ ಶನಿವಾರ ಸಂಜೆ ಸುರಿದ ಮಳೆಗೆ ಕೆನರಾ ಬ್ಯಾಂಕ್‌ ಕ್ರಾಸ್‌ನಿಂದ ಪೊಲೀಸ್ ಠಾಣೆವರೆಗೂ ನೀರು ರಸ್ತೆಯಲ್ಲಿ ಹರಿಯಿತು.

ಇದರಿಂದ ಠಾಣೆ ಎದುರಿನ ಕ್ವಾರ್ಟರ್ಸ್‌ಗಳಲ್ಲಿ ಭಾರಿ ಪ್ರಮಾಣದ ನೀರು ನುಗ್ಗಿತು.

ಸೊರಬ ರಸ್ತೆಯ ಮೊದಲನೇ ಕೆನರಾ ಬ್ಯಾಂಕ್ ಪಕ್ಕದ ತಿರುವಿನಲ್ಲಿ ಪೈಪ್‌ಲೈನ್‌ ಕಾಮಗಾರಿ ಅಪೂರ್ಣಗೊಂಡಿದ್ದು, ರಸ್ತೆಯಲ್ಲಿ ಗುಂಡಿ ಬಿದ್ದಿದೆ.

ಮಳೆ ಬಂದಾಗ ಗುಂಡಿಯಲ್ಲಿ ನೀರು ತುಂಬುವ ಕಾರಣ ರಸ್ತೆ ಕಾಣದೇ ‌ಅಪಘಾತಗಳು ಸಂಭವಿಸುತ್ತಿವೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳು ಚರಂಡಿ ವ್ಯವಸ್ಥೆ ಮಾಡಬೇಕು ಎಂದು ಮಂಡಕ್ಕಿ ಹೋಟೆಲ್ ಮಾಲೀಕ ಲಿಂಗರಾಜ್ ಗೌಳಿ 
ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು