ಸೋಮವಾರ, ಸೆಪ್ಟೆಂಬರ್ 21, 2020
22 °C

ಶಿವಮೊಗ್ಗ: ಮುಂದುವರಿದ ಮಳೆ, ತುಂಬಿ ಹರಿದ ತುಂಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಜಿಲ್ಲೆಯ ಎಲ್ಲೆಡೆ ಬುಧವಾರವೂ ಮಳೆ ಆರ್ಭಟ ಮುಂದುವರಿದಿದೆ. 

ಕೆಲವು ತಾಲ್ಲೂಕುಗಳಲ್ಲಿ ರಾತ್ರಿ ಇಡೀ ಮಳೆಯಾಗಿದೆ. ಹೊಸನಗರ ತಾಲ್ಲೂಕಿನಲ್ಲಿ ಒಂದೇ ದಿನ 483 ಮಿ.ಮೀ ಮಳೆಯಾಗಿದೆ.  ಜಲಾಶಯಗಳ ನದಿ ಪಾತ್ರದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ತುಂಗಾ ಜಲಾಶಯಕ್ಕೆ 55,774 ಕ್ಯುಸೆಕ್, ಭದ್ರಾಗೆ 22,203 ಕ್ಯುಸೆಕ್ ನೀರು ಹರಿದು ಬರುತ್ತಿದೆ.

ತುಂಗಾ ಜಲಾಶಯದಿಂದ 59 ಸಾವಿರ ಕ್ಯುಸೆಕ್‌ ನೀರು ಹೊರ ಬಿಡಲಾಗುತ್ತಿದೆ. ಇದರಿಂದ ತುಂಗಾ ನದಿ ತುಂಬಿ ಹರಿಯುತ್ತಿದೆ. ಶಿವಮೊಗ್ಗ ನಗರದ ಕೋರ್ಪಲ್ಲಯ್ಯನ ಛತ್ರದ ಮಂಟಪ ಮುಳುಗಿದೆ. ಕೊರೊನಾ ಸಂಕಷ್ಟದ ಸಮಯದಲ್ಲೂ ಜನರು ತಂಡೋಪತಂಡವಾಗಿ ಬಂದು ತುಂಬಿದ ನದಿ ವೀಕ್ಷಿಸಿದರು. ಕೆಲವರು ಪೂಜೆ ಸಲ್ಲಿಸಿದರು.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು