ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಯುವ ಸಮುದಾಯಕ್ಕೆ ರಾಜಕೀಯ ಶಕ್ತಿ ನೀಡಿದವರು ರಾಜೀವ್ ಗಾಂಧಿ

Published 21 ಮೇ 2024, 14:16 IST
Last Updated 21 ಮೇ 2024, 14:16 IST
ಅಕ್ಷರ ಗಾತ್ರ

ಸಾಗರ: ಮತದಾನದ ಹಕ್ಕನ್ನು ಚಲಾಯಿಸಲು ಇದ್ದ ವಯೋಮಿತಿಯನ್ನು 21 ವರ್ಷಗಳಿಂದ 18 ವರ್ಷಕ್ಕೆ ಇಳಿಸುವ ಮೂಲಕ ಯುವ ಸಮುದಾಯಕ್ಕೆ ರಾಜಕೀಯ ಶಕ್ತಿಯನ್ನು ನೀಡಿದ್ದು ರಾಜೀವ್ ಗಾಂಧಿಯವರ ಹೆಗ್ಗಳಿಕೆಯಾಗಿದೆ ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ ಹೇಳಿದರು.

ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಂಚಾಯತ್ ರಾಜ್ ಯೋಜನೆಯನ್ನು ಸದೃಢಗೊಳಿಸಿದ್ದು ಸಹ ರಾಜೀವ್ ಗಾಂಧಿಯವರ ರಾಜಕೀಯ ಇಚ್ಛಾಶಕ್ತಿಯ ದ್ಯೋತಕವಾಗಿದೆ ಎಂದರು.

ಕಾಂಗ್ರೆಸ್‌ನ ಪ್ರಮುಖರಾದ ಕೆ.ಹೊಳಿಯಪ್ಪ, ಎಲ್.ಚಂದ್ರಪ್ಪ, ಮಹಾಬಲ ಕೌತಿ, ಷಣ್ಮುಖ ಸೂರನಗದ್ದೆ, ಗಿರೀಶ್ ಕೋವಿ, ಕನ್ನಪ್ಪ, ಅಣ್ಣಪ್ಪ ಭೀಮನೇರಿ, ಕಿರಣ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT