ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ| ಕೊಬ್ಬರಿಗೆ ಕನಿಷ್ಠ ₹20 ಸಾವಿರ ಬೆಂಬಲ ಬೆಲೆಗೆ ಆಗ್ರಹ

ರಾಜ್ಯ ರೈತ ಸಂಘ, ಹಸಿರು ಸೇನೆ ಪ್ರತಿಭಟನೆ
Published 5 ಆಗಸ್ಟ್ 2023, 15:32 IST
Last Updated 5 ಆಗಸ್ಟ್ 2023, 15:32 IST
ಅಕ್ಷರ ಗಾತ್ರ

ಶಿವಮೊಗ್ಗ: ತೆಂಗು ಬೆಳೆಗಾರರನ್ನು ಒಳಗೊಂಡಂತೆ ರಾಜ್ಯದ ಎಲ್ಲಾ ರೈತರ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಶನಿವಾರ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ, ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮನವಿ ಸಲ್ಲಿಸಿದರು.

ಕೊಬ್ಬರಿ ದರ ತೀವ್ರವಾಗಿ ಕುಸಿದಿದೆ. ತೆಂಗಿನ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಪ್ರತಿ ಕ್ವಿಂಟಾಲ್‌ ಕೊಬ್ಬರಿಗೆ ಕನಿಷ್ಠ ₹20 ಸಾವಿರ ಬೆಂಬಲ ಬೆಲೆ ನಿಗದಿಪಡಿಸಬೇಕು. ಎಳನೀರು ಮತ್ತು ತೆಂಗಿನ ಕಾಯಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು. ಪ್ರಮಾಣ ಮಿತಿ ಹೇರದೆ ತೆಂಗಿನ ಉತ್ಪನ್ನವನ್ನು ಸಂಪೂರ್ಣವಾಗಿ ಖರೀದಿಸಬೇಕು. ಮುಕ್ತ ಮಾರುಕಟ್ಟೆಯಲ್ಲಿ ತೆಂಗಿನ ಉತ್ಪನ್ನ ಮತ್ತು ಖಾದ್ಯ ತೈಲ ಆಮದನ್ನು ನಿಲ್ಲಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿದ್ದಾರೆ.

ಖರೀದಿ ಕೇಂದ್ರಗಳು ವರ್ಷವಿಡೀ ತರೆದಿರಬೇಕು ಎಂದು ಆಗ್ರಹಿಸಿದ ಪ್ರತಿಭಟನಕಾರರು, ತಿಪಟೂರಿನಿಂದ ಬೆಂಗಳೂರಿಗೆ 15 ಜಿಲ್ಲೆಗಳ ರೈತರು ಪಾದಯಾತ್ರೆ ಕೈಗೊಳ್ಳಲಿದ್ದಾರೆ. ದಿನ ಇನ್ನೂ ನಿಗದಿ ಆಗಿಲ್ಲ ಎಂದರು. 

ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಚ್.ಆರ್.ಬಸವರಾಜಪ್ಪ, ಪದಾಧಿಕಾರಿಗಳಾದ ಕೆ.ರಾಘವೇಂದ್ರ, ಹಿಟ್ಟೂರು ರಾಜು, ಎಸ್.ಶಿವಮೂರ್ತಿ, ಪಿ.ಡಿ.ಮಂಜಪ್ಪ, ಕೆ.ರುದ್ರೇಶ್, ಸಿ.ಚಂದ್ರಪ್ಪ, ಜಿ.ಎನ್. ಪಂಚಾಕ್ಷರಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT