ಶಿವಮೊಗ್ಗ: ರಾಜ್ಯಸಭೆಯ 3 ಸ್ಥಾನಗಳನ್ನೂ ಉಳಿಸಿಕೊಳ್ಳುವ ಕುರಿತು ಬಿಜೆಪಿಯಲ್ಲಿ ಚಿಂತನೆ ನಡೆದಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.

‘ರಾಜ್ಯದಿಂದ ರಾಜ್ಯಸಭೆಗೆ ಇಬ್ಬರು ಸದಸ್ಯರ ಆಯ್ಕೆ ಖಚಿತವಾಗಿದೆ. ಮೂರನೇ ಸದಸ್ಯರ ಆಯ್ಕೆ ಬಗ್ಗೆ ಚಿಂತನೆ ನಡೆದಿದೆ. ಜೆಡಿಎಸ್ ಬೆಂಬಲ ಕೋರುವ ಕುರಿತು ಚಿಂತನೆ ನಡೆದಿದೆ’ ಎಂದರು.

ಶಿವಮೊಗ್ಗದಲ್ಲಿ ವಾಡಿಕೆಗಿಂತ ನಾಲ್ಕು ಪಟ್ಟು ಅಧಿಕ ಮಳೆ ಒಂದೇ ದಿನದಲ್ಲಿ ಸುರಿದಿದೆ. ಹಲವು ಕಡೆ ಸಾರ್ವಜನಿಕರಿಗೆ ಸಮಸ್ಯೆಗಳಾಗಿವೆ. ಸಂತ್ರಸ್ತರಿಗೆ ಆಹಾರ ವಿತರಣೆ ಮಾಡಲಾಗುತ್ತಿದೆ. ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಭಾಗಶಃ ಹಾನಿಯಾದ ಮನೆಗಳು ಬೀಳುವ ಸಂಭವವಿರುವುದರಿಂದ ಎರಡು ದಿನ ಬಿಟ್ಟು ಸಂಪೂರ್ಣ ನಷ್ಟದ ಅಂದಾಜನ್ನು ಅಧಿಕಾರಿಗಳು ಸಲ್ಲಿಸಲಿದ್ದಾರೆ ಎಂದರು.

ಸ್ಮಾರ್ಟ್ ಸಿಟಿ ಕಾಮಗಾರಿ ಸಂದರ್ಭದಲ್ಲಿ ಕೆಲವು ಕಡೆ ನೀರು ಹರಿದು ಹೋಗುವ ಪೈಪ್ಗಳಲ್ಲಿ ಕಸ ತುಂಬಿದ್ದರಿಂದ ನೀರು ಹರಿಯದೇ ಕೆಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಇನ್ನೊಂದು ವಾರದಲ್ಲಿ ಎಲ್ಲಾ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮಿ ಪ್ರಸಾದ್, ತಹಶೀಲ್ದಾರ್ ನಾಗರಾಜ್, ಮೇಯರ್ ಸುನಿತಾ ಅಣ್ಣಪ್ಪ, ‘ಸೂಡಾ’ ಅಧ್ಯಕ್ಷ ನಾಗರಾಜ್, ಪಾಲಿಕೆ ಸದಸ್ಯ ಎಸ್.ಎನ್.ಚನ್ನಬಸಪ್ಪ, ‘ಸ್ಮಾರ್ಟ್ ಸಿಟಿ’ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ, ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.