ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆರುಗು ನೀಡಿದ ಜನಪದ ಕಲಾ ತಂಡಗಳು

Last Updated 2 ನವೆಂಬರ್ 2022, 8:16 IST
ಅಕ್ಷರ ಗಾತ್ರ

ರಿಪ್ಪನ್‌ಪೇಟೆ: ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್‌ ರಾಜ್‍ಕುಮಾರ್ ಸ್ಮರಣೋತ್ಸವ ಅಭಿಮಾನಿ ಬಳಗ ಮಂಗಳವಾರ ಆಯೋಜಿಸಿದ್ದ 67ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಜನಪದ ಕಲಾ ತಂಡಗಳ ಮೆರವಣಿಗೆಗೆ ಮೆರುಗು ನೀಡಿತ್ತು.

ಹಿರಿಯ ಸಾಹಿತಿ ಹನುಮಂತ ಅನಂತ ಪಾಟೀಲ್ ಅವರು ಭುವನೇಶ್ವರಿ ದೇವಿಯ ಮೆರವಣಿಗೆಗೆ ಚಾಲನೆ ನೀಡಿದರು.

ಮೆರವಣಿಗೆಯಲ್ಲಿ ಹೆಗ್ಗೂಡಿನ ಮಹಿಳೆಯರ ಡೊಳ್ಳು ಕುಣಿತ, ಚಿಕ್ಕಮಗಳೂರಿನ ಮಹಿಳೆಯರ ವೀರಗಾಸೆ, ಸಾಗರ ತಾಲ್ಲೂಕಿನ ಮಹಿಳೆಯರ ಚೆಂಡೆ ನೃತ್ಯ ಹಾಗೂ ವಿವಿಧ ಶಾಲಾ ಕಾಲೇಜುಗಳ ವಾದ್ಯ ಘೋಷ ಮೆರವಣಿಗೆಗೆ ಸಾಥ್ ನೀಡಿದವು.

ತೆರೆದ ವಾಹನದಲ್ಲಿ ಅನಾವರಣಗೊಂಡ ಭಾರಿ ಗಾತ್ರದ ತಾಯಿ ಭುವನೇಶ್ವರಿ ಹಾಗೂ ಪುನೀತ್ ರಾಜ್‌ಕುಮಾರ್ ಅವರ ಭಾವಚಿತ್ರ ಎಲ್ಲರನ್ನು ಬರಸೆಳೆದವು. ಸಹಸ್ರಾರು ಸಂಖ್ಯೆಯ ಶಾಲಾ, ಕಾಲೇಜು ವಿದ್ಯಾರ್ಥಿಗಳ ಪಥಸಂಚಲನದ ಆಕರ್ಷಣೀಯವಾಗಿತ್ತು.

ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಮೆಣಸೆ ಆನಂದ, ಮಾಜಿ ಅಧ್ಯಕ್ಷ ಆರ್.ಎ.ಚಾಬುಸಾಬ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ಗ್ರಾಮ ಪಂಚಾಯಿತಿ ಆಡಳಿತ ವರ್ಗ ಹಾಗೂ ಸದಸ್ಯರು, ನಾಡ ಕಚೇರಿ ಉಪ ತಹಶೀಲ್ದಾರ್ ಹುಚ್ಚರಾಯಪ್ಪ, ಪಿಎಸ್ಐ ಶಿವಾನಂದ ಕೋಳಿ, ಆಟೊ ಚಾಲಕರ ಮತ್ತು ಮಾಲೀಕರ ಸಂಘದ ಸದಸ್ಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT