ಮಂಗಳವಾರ, ಅಕ್ಟೋಬರ್ 26, 2021
23 °C

ರಾಣೆಬೆನ್ನೂರು ರೈಲು ಮಾರ್ಗ ಶೀಘ್ರ: ರಾಘವೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ಶಿಕಾರಿಪುರ–ರಾಣೆಬೆನ್ನೂರು ನೂತನ ರೈಲು ಮಾರ್ಗದ ಮೊದಲ ಹಂತದ ಕಾಮಗಾರಿ ಗಳು ಈ ವರ್ಷದ ಡಿಸೆಂಬರ್‌ ಅಂತ್ಯಕ್ಕೆ ಆರಂಭವಾಗಲಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಶಿವಮೊಗ್ಗದಲ್ಲಿ ಬುಧವಾರ ರೈಲ್ವೆ ಅಧಿಕಾರಿಗಳ ತಂಡದ ಜತೆ ಚರ್ಚಿಸಿದ ನಂತರ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು.

‘ಶಿವಮೊಗ್ಗ–ರಾಣೆಬೆನ್ನೂರು ಮಧ್ಯೆ ರೈಲು ಸಂಪರ್ಕ ಕಲ್ಪಿಸಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ನಾನು ಅವಿರತ ಪ್ರಯತ್ನ ನಡೆಸಿದ್ದೆವು. ಅಧಿಕಾರಿಗಳ ತಂಡ ರಾಣೆಬೆನ್ನೂರಿನಿಂದ ಶಿಕಾರಿಪುರ, ಶಿವಮೊಗ್ಗವರೆಗೆ ಸ್ಥಳ ಪರಿಶೀಲನೆ ನಡೆಸಿದೆ. ಅಧಿಕಾರಿಗಳು ಭೂ ಸ್ವಾಧೀನ, ಸ್ಥಳೀಯ ಸಮಸ್ಯೆಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ’ ಎಂದು ವಿವರ ನೀಡಿದರು.

ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡದ ತಾಂತ್ರಿಕ ವಿಷಯಗಳ ಕುರಿತು ರೈಟ್ಸ್ ಕಂಪನಿ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದೆ. ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು