ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿವಮೊಗ್ಗ | ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ

Published 27 ಜೂನ್ 2024, 16:20 IST
Last Updated 27 ಜೂನ್ 2024, 16:20 IST
ಅಕ್ಷರ ಗಾತ್ರ

ಶಿವಮೊಗ್ಗ: 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ 22 ವರ್ಷದ ಯುವಕನಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹65 ಸಾವಿರ ದಂಡ ವಿಧಿಸಿದೆ.

2023ರಲ್ಲಿ ಸಾಗರ ತಾಲ್ಲೂಕಿನಲ್ಲಿ ಪ್ರಕರಣ ನಡೆದಿತ್ತು. ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಸಾಗರ ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್‌ ಎಸ್‌.ಎನ್. ಮಹಾಬಲೇಶ್ವರ್ ನ್ಯಾಯಾಲಯಕ್ಕೆ ಆರೋಪಿತನ ವಿರುದ್ಧ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಲತಾ, ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಬಾಲಕಿಗೆ ದಂಡದ ಮೊತ್ತದಲ್ಲಿ ₹55 ಸಾವಿರ, ಸರ್ಕಾರದಿಂದ ₹7 ಲಕ್ಷ ಪರಿಹಾರ ನೀಡುವಂತೆ ಹಾಗೂ ದಂಡ ಕಟ್ಟಲು ವಿಫಲನಾದಲ್ಲಿ ಅಪರಾಧಿಗೆ ಹೆಚ್ಚುವರಿಯಾಗಿ ನಾಲ್ಕು ತಿಂಗಳು ಸಾದಾ ಸೆರೆವಾಸ ಶಿಕ್ಷೆ ವಿಧಿಸಿ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT