ಶಿವಮೊಗ್ಗ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅರ್ಚಕನಿಗೆ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ 14 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದೆ.

ಅಚ್ಯತರಾವ್ ಲೇಔಟ್‌ನ ದುರ್ಗಾ ಪರಮೇಶ್ವರಿ ದೇವಸ್ಥಾನದ ಅರ್ಚಕ ಶಿವಕುಮಾರ್ ಶಿಕ್ಷೆಗೆ ಗುರಿಯಾದ ಆರೋಪಿ.

ಅರ್ಚಕ ಶಿವಕುಮಾರ್ 2016ರಲ್ಲಿ ಬಾಲಕಿಗೆ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಬರುವಂತೆ ಮಾಡುವ ಆಮಿಷ ತೋರಿಸಿ ದೇವಸ್ಥಾನಕ್ಕೆ ಕರೆಸಿಕೊಂಡು ಅತ್ಯಾಚಾರವೆಸಗಿದ್ದರು ಎಂದು ಮಹಿಳಾ ಠಾಣೆಗೆ ದೂರು ನೀಡಲಾಗಿತ್ತು. ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಬಿ.ಶಿವಪ್ರಸಾದ್ ಅವರು ಆರೋಪಿಗೆ ಶಿಕ್ಷೆ ಹಾಗೂ ₹ 25 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡದ ಹಣ ಸಂತ್ರಸ್ತೆಗೆ ನೀಡುವಂತೆ ಸೂಚಿಸಿದ್ದಾರೆ.

ಸರ್ಕಾರದ ಪರವಾಗಿ ಅಭಿಯೋಜಕ ಕೆ.ಎಸ್.ಸತೀಶ್ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.