ಶಿವಮೊಗ್ಗ : ಹಸ್ತಾಂತರಗೊಂಡಿರುವ ವಾಣಿಜ್ಯ ಸಂಕೀರ್ಣಗಳನ್ನು ಸಾರ್ವಜನಿಕರ ಉಪಯೋಗಕ್ಕೆ ಕೊಡದೇ ಮಹಾನಗರ ಪಾಲಿಕೆ ಕೋಟ್ಯಾಂತರ ರೂಪಾಯಿ ನಷ್ಟವುಂಟುಮಾಡಿದೆ ಎಂದು ಆರೋಪಿಸಿ ಶನಿವಾರ ರಾಷ್ಟ್ರಭಕ್ತರ ಬಳಗದಿಂದ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಕೆ.ಈ. ಕಾಂತೇಶ್ ಮಾತನಾಡಿ, ನಗರದಲ್ಲಿ ಆಶ್ರಯ ಯೋಜನೆಯ ಮನೆಗಳನ್ನು ಆದಷ್ಟು ಬೇಗ ವಿತರಿಸಬೇಕು. ಇ-ಸ್ವತ್ತು ನೊಂದಣಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತಡೆಗಟ್ಟಬೇಕು. ರಸ್ತೆಗಳಲ್ಲಿನ ಗುಂಡಿಗಳ ಮುಚ್ಚಬೇಕು. ನಿರಂತರ ನೀರು ಪೂರೈಕೆ ಯೋಜನೆ ಸಮರ್ಪಕವಾಗಿ ಜಾರಿಗೊಳಿಸಬೇಕು. ಬೀದಿದೀಪ ಮತ್ತು ನಗರದ ಸ್ವಚ್ಛತೆಗೆ ಆದ್ಯತೆ ಕೊಡಬೇಕು ಎಂದು ಆಗ್ರಹಿಸಿದರು.

ಕೊಳಚೆ ಪ್ರದೇ ಶದ ನಿವಾಸಿಗಳಿಗೆ ಮೂಲಸೌಕರ್ಯ ಕಲ್ಪಿಸಬೇಕು. ಪೌರ ಕಾರ್ಮಿಕರಿಗೆ ಗೃಹಭಾಗ್ಯ ಯೋಜನೆ ತಲುಪಬೇಕು. ಪೌರಕಾರ್ಮಿಕರ ಭವನ ನಿರ್ಮಿಸಬೇಕು. ರೋಟರಿ ಅನಿಲ ಚಿತಾಗಾರ ದುರಸ್ತಿಪಡಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾಜಿ ಕಾರ್ಪೋರೇಟರ್ ಈ. ವಿಶ್ವಾಸ್ ಮಾತನಾಡಿ, ಶಿವಪ್ಪನಾಯಕ ಹೂವಿನ ಮಾರುಕಟ್ಟೆ, ಗಾರ್ಡನ್ ಏರಿಯಾ ವಾಣಿಜ್ಯ ಸಂಕಿರ್ಣ, ಗಾಂಧಿನಗರದ ವಾಣಿಜ್ಯ ಸಂಕಿರ್ಣಗಳಲ್ಲಿ ನಿರ್ಮಾಣವಾದ ಮಳಿಗೆಗಳನ್ನು ಇದುವರೆಗೂ ಮಹಾನಗರಪಾಲಿಕೆ ಬಾಡಿಗೆ ನೀಡಿಲ್ಲ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಮಾತನಾಡಿ, ರಾಷ್ಟ್ರಭಕ್ತರ ಬಳಗ ಸದಾ ಜನಪರ ಹೋರಾಟಕ್ಕೆ ಮುಂಚೂಣಿಯಲ್ಲಿದೆ. ಪಾಲಿಕೆ ವ್ಯಾಪ್ತಿಯ ಎಲ್ಲಾ ಸಮಸ್ಯೆಗಳು ಬಗೆಹರಿಸುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದರು.

ಪ್ರತಿಭಟನೆಯ ನೇತೃತ್ವ ರಾಷ್ಟ್ರಭಕ್ತರ ಬಳಗದ ಪ್ರಮುಖರಾದ ಲಕ್ಷ್ಮೀ ಶಂಕರ್ನಾಯ್ಕ, ಆರತಿ ಆ.ಮ ಪ್ರಕಾಶ್, ಬಾಲು, ಶ್ರೀಕಾಂತ್, ಮೋಹನ್ ಜಾಧವ್, ಶಕುಂತಲಾ, ಶಶಿಕಲಾ, ಚಿದಾನಂದ, ಕುಬೇರಪ್ಪ, ನಾಗರತ್ನಮ್ಮ, ರಾಜೇಶ್ವರಿ, ಜಯಲಕ್ಷ್ಮೀ, ಎಸ್ಟಿಡಿ ರಾಜು, ಆಶಾ ಚನ್ನಬಸಪ್ಪ, ಸೀತಾಲಕ್ಷ್ಮೀ, ಅನಿತಾ, ಇಂದಿರಾನಗರ ರಾಜು ವಹಿಸಿದ್ದರು.

ಕೆಲವೊಂದು ತಾಂತ್ರಿಕ ತೊಂದರೆಯಿಂದ ಇ-ಸ್ವತ್ತು ನೀಡಲು ತಡವಾಗಿದೆ. ಆದರೂ ನಾನು ಬಂದ ಬಳಿಕ ಆರು ತಿಂಗಳಲ್ಲಿ 30000 ಇ-ಸ್ವತ್ತು ವಿತರಿಸಲಾಗಿದೆ
ಮಾಯಣ್ಣಗೌಡ ಮಹಾನಗರ ಪಾಲಿಕೆ ಆಯುಕ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.