ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗೋವಿಂದಪುರ ಆಶ್ರಯ ಮನೆ; ಕಾಯಕಲ್ಪಕ್ಕೆ ಆಗ್ರಹ

ರಾಷ್ಟ್ರಭಕ್ತರ ಬಳಗದಿಂದ ಪ್ರತಿಭಟನಾ ರ‍್ಯಾಲಿ; ಪಾಲಿಕೆಗೆ ಮನವಿ ಸಲ್ಲಿಕೆ
Published 13 ಆಗಸ್ಟ್ 2024, 14:28 IST
Last Updated 13 ಆಗಸ್ಟ್ 2024, 14:28 IST
ಅಕ್ಷರ ಗಾತ್ರ

ಶಿವಮೊಗ್ಗ : ಇಲ್ಲಿನ ಗೋವಿಂದಾಪುರದ ಆಶ್ರಯ ಬಡಾವಣೆಯ ಎಲ್ಲಾ ಮನೆಗಳನ್ನು ಪೂರ್ಣಗೊಳಿಸಿ ಮೂಲ ಸೌಲಭ್ಯ ಕಲ್ಪಿಸಬೇಕು. ಕಟ್ಟಡ ಕಾರ್ಮಿಕರಿಗೆ ನೀಡಬೇಕಾದ  ಸೌಲಭ್ಯಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ರಾಷ್ಟ್ರಭಕ್ತರ ಬಳಗದಿಂದ ಮಂಗಳವಾರ ಪ್ರತಿಭಟನಾ ರ‍್ಯಾಲಿ ನಡೆಸಿ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರ ನೇತೃತ್ವದಲ್ಲಿ ನಗರದ ದೈವಜ್ಞ ಕಲ್ಯಾಣ ಮಂದಿರದಿಂದ ಮಹಾನಗರ ಪಾಲಿಕೆಯವರೆಗೆ ಆಶ್ರಯ ಫಲಾನುಭವಿಗಳು ಮತ್ತು ಕಟ್ಟಡ ಕಾರ್ಮಿಕರು ಬೃಹತ್ ಮೆರವಣಿಗೆಯಲ್ಲಿ ಬಂದು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಗೋವಿಂದಾಪುರ ಆಶ್ರಯ ಬಡಾವಣೆಯ ಎಲ್ಲಾ ಮನೆಗಳ ಪೂರ್ಣಗೊಳಿಸಿ ಅಗತ್ಯ ಮೂಲ ಸೌಕರ್ಯಗಳಾದ ವಿದ್ಯುತ್, ಕುಡಿಯುವ ನೀರು, ರಸ್ತೆ ಹಾಗೂ ನಗರ ಸಾರಿಗೆ ವ್ಯವಸ್ಥೆ, ಬೀದಿ ದೀಪ ವ್ಯವಸ್ಥೆ ಕಲ್ಪಿಸಿ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು.

ಪರಿಶಿಷ್ಟ ಜಾತಿ, ಪಂಗಡಗಳಿಗೆ ವಾಲ್ಮೀಕಿ ಅಭಿವೃದ್ದಿ ನಿಗಮದಿಂದ ಬರಬೇಕಾದ ಅನುದಾನ  ಕೂಡಲೇ ಬಿಡುಗಡೆಗೊಳಿಸಬೇಕು. ಕಾಲೊನಿಗಳಿಗೆ ಮೂಲಸೌಕರ್ಯ ಕಲ್ಪಿಸಬೇಕು. ಕೂಡಲೇ ಪಾಲಿಕೆ ಚುನಾವಣೆ ನಡೆಸಿ ಜನಪ್ರತಿನಿಧಿಗಳ ಪಾಲ್ಗೊಳ್ಳುವಿಕೆಗೆ ಅವಕಾಶ ಮಾಡಿಕೊಡಬೇಕು ಎಂದು ಪ್ರತಿಭಟನಾಕಾರರು  ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಈ.ವಿಶ್ವಾಸ್, ಶಂಕರ್‌ಗನ್ನಿ, ಎಂ.ಶಂಕರ್, ಕೆ.ಈ.ಕಾಂತೇಶ್, ಮಹಾಲಿಂಗಶಾಸ್ತ್ರಿ, ಮಂಜುನಾಥ್, ಬಾಲು, ಶಂಕರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT